ಬೈಕ್ ರ್ಯಾಲಿ ಮತದಾನ ಜಾಗೃತಿ ಮೂಡಿಸಿದ ಸರ್ಕಾರಿ ಅಧಿಕಾರಿಗಳು

15-RNR-04
Published on

ರಾಣೆಬೆನ್ನೂರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತ, ನಗರಸಭೆ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸೋಮವಾರ ನಗರದಲ್ಲಿ ಬೈಕ್ ರ್ಯಾಲಿ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ನಗರದ ತಹಸೀಲ್ದಾರ್ ಕಚೇರಿಯಿಂದ ಆರಂಭಗೊಂಡ ಬೈಕ್ ರ್ಯಾಲಿ ಹಳೇ ಪಿ.ಬಿ. ರಸ್ತೆ, ಕುರುಬಗೇರಿ ಕ್ರಾಸ್, ಎಂ.ಜಿ. ರಸ್ತೆ, ನೆಹರು ಮಾರುಕಟ್ಟೆ, ಪೋಸ್ಟ್ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಉರ್ದು ಹೈಸ್ಕೂಲ್ ಮೈದಾನದಲ್ಲಿ ಕೊನೆಗೊಂಡಿತು.
ಸಹಾಯಕ ಚುನಾವಣಾಧಿಕಾರಿ ರೇಷ್ಮಾ ಕೌಸರ ಪ್ರತಿಜ್ಞಾವಿಧಿ ಬೋಧಿಸಿದರು.
ತಹಸೀಲ್ದಾರ್ ಸುರೇಶಕುಮಾರ, ತಾಪಂ ಇಒ ಸುಮಲತಾ, ನಗರಸಭೆ ಆಯುಕ್ತ ನಿಂಗಪ್ಪ ಕುಮ್ಮಣ್ಣನವರ, ಬಿಇಒ ಎಂ.ಎಚ್. ಪಾಟೀಲ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ನೂರಅಹ್ಮದ್ ಹಲಗೇರಿ, ಸಹಾಯಕ ಕೃಷಿ ನಿರ್ದೇಶಕ ಶಾಂತಮನಿ ಜಿ., ಪರಶುರಾಮ ಪೂಜಾರ, ಪಶು ವೈದ್ಯಾಧಿಕಾರಿ ಡಾ. ನೀಲಕಂಠಪ್ಪ ಅಂಗಡಿ, ದಿಂಗಾಲೇಶ್ವರ ಅಂಗೂರ ಹಾಗೂ ವಿವಿಧ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net