ಅಪಘಾತದಲ್ಲಿ ಬೈಕ್ ಸವಾರ ಸಾವು

pradeep
Published on

ಶ್ರೀರಂಗಪಟ್ಟಣ: ತಾಲೂಕಿನ ಹಳೇ ಕರಂಗೂರು ಸಮೀಪದ ಶ್ರೀರಂಗಪಟ್ಟಣ-ಪಾಂಡವಪುರ ಹೆದ್ದಾರಿಯ ಮೂಲೆಮಂಟಪ ತಿರುವಿನಲ್ಲಿ ಸೋಮವಾರ ನಿಯಂತ್ರಣ ಕಳೆದುಕೊಂಡ ಬೈಕ್ ಹೆದ್ದಾರಿ ಜಮೀನಿನ ಹಳ್ಳಕ್ಕೆ ಬಿದ್ದ ಪರಿಣಾಮ ಸವಾರ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಪಾಂಡವಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ನಂಜೇಗೌಡರ ಪುತ್ರ ಪ್ರದೀಪ್ (41) ಮೃತಪಟ್ಟವರು.

ಇವರು ಬೈಕ್‌ನಲ್ಲಿ ಶ್ರೀರಂಗಪಟ್ಟಣದಿಂದ ಸ್ವಗ್ರಾಮಕ್ಕೆ ಹಿಂದಿರುಗುವಾಗ ಈ ಅವಘಡ ಸಂಭವಿಸಿದೆ. ತೀವ್ರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಬೈಕ್ ಹಿಂಬದಿ ಕುಳಿತ್ತಿದ್ದ ಸ್ನೇಹಿತ ಅರಕೇಶ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.


ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ವಾರಸುದಾರರಿಗೆ ಪ್ರದೀಪ್ ಮೃತದೇಹ ಒಪ್ಪಿಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net