ಕಿಕ್ಕೇರಿ : ಹೋಬಳಿಯ ಗಾಂಧಿನಗರದ ಸಮೀಪದ ಕೃಷ್ಣಾಪುರ ಬಳಿ ಬುಧವಾರ ರಾತ್ರಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಾಂಧಿನಗರದ ಮೊಗಣ್ಣಶೆಟ್ಟಿ(60) ಮೃತ ಬೈಕ್ ಸವಾರ. ಕಿಕ್ಕೇರಿಗೆ ಅನ್ಯಕಾರ್ಯ ನಿಮಿತ್ತ ತೆರಳಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ವೇಳೆ ಕೃಷ್ಣಾಪುರ ಬಳಿ ಕೆ.ಆರ್.ಪೇಟೆ ಮಾರ್ಗವಾಗಿ ಚನ್ನರಾಯಪಟ್ಟಣ ಕಡೆಗೆ ಸಾಗುತ್ತಿದ್ದ ರಾಜ್ಯ ಸಾರಿಗೆ ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಮೊಗಣ್ಣಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಇನ್‌ಸ್ಪೆಕ್ಟರ್ ರೇವತಿ ಆಗಮಿಸಿ ಪರಿಶೀಲಿಸಿದರು. ಮೃತದೇಹವನ್ನು ಕೆ.ಆರ್. ಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಯಿತು. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಮೃತದೇಹವನ್ನು ಹಸ್ತಾಂತರಿಸಲಾಯಿತು. ಕಿಕ್ಕೇರಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.