ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

Published on

ಗಂಡಸಿ: ಇಲ್ಲಿನ ಜಕ್ಕನಹಳ್ಳಿ ಗೇಟ್ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಮೃತಪಟ್ಟಿದ್ದಾನೆ.

ಲಾಳನಕೆರೆ ನಿವಾಸಿ ಸಚಿನ್ (19) ಮೃತಪಟ್ಟವನು. ಈತ ಹೋಬಳಿಯ ಹೊನ್ನಕುಮಾರನಹಳ್ಳಿ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮಹೋತ್ಸವದ ಪ್ರಯುಕ್ತ ಶನಿವಾರ ರಾತ್ರಿ ಏರ್ಪಡಿಸಿದ್ದ ರಸಮಂಜರಿ ಕಾರ್ಯಕ್ರಮ ವೀಕ್ಷಿಸಿ ನಂತರ ಗಂಡಸಿಯಲ್ಲಿ ನಡೆಯುತ್ತಿದ್ದ ಗಣಪತಿ ಮೆರವಣಿಗೆ ನೋಡಲು ರಾತ್ರಿ 12 ಗಂಟೆ ಸುಮಾರಿನಲ್ಲಿ ಅರಸೀಕೆರೆ ಮಾರ್ಗದಿಂದ ಬರುತ್ತಿದ್ದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಂಡಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net