ಬೈಕ್‌ಗೆ ಕಾರು ಡಿಕ್ಕಿಯಾಗಿ ಸವಾರ ಸಾವು

Oplus_16908288
ಮೃತ ಡಾಲ್ಟ
Published on

ಸಿದ್ದಾಪುರ: ಇಲ್ಲಿಗೆ ಸಮೀಪದ ಅಮ್ಮತ್ತಿಯಲ್ಲಿ ಭಾನುವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಮೃಪಟ್ಟಿದ್ದಾನೆ. ಬೈಕ್‌ನ ಹಿಂಬದಿ ಸವಾರನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಅಮ್ಮತ್ತಿ ಸಮೀಪದ ಆನಂದಪುರದ ನಿವಾಸಿ ಡಾಲ್ಟ ಮೃತಪಟ್ಟವರು. ಹಿಂಬದಿ ಸವಾರ ವಿಲ್ಲಿ ಎಂಬಾತನು ಗಂಭೀರ ಗಾಯಗೊಂಡಿದ್ದಾನೆ. ಕಾರು ಚಾಲಕ ಹಾಗೂ ಕಾರಿನಲ್ಲಿದ್ದ ಮತ್ತೊಬ್ಬ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net