ಅಪಘಾತದಲ್ಲಿ ಬೈಕ್​ ಸವಾರ ಸಾವು

Published on

ನೆಲಮಂಗಲ: ರಾ.ಹೆದ್ದಾರಿ. 48ರ ವಿಶ್ವೇಶ್ವರಪುರ ಬಳಿ ಟ್ರಾ$್ಯಕ್ಟರ್​ ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ದ್ವಿಚಕ್ರವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಬೆಂಗಳೂರು ಉತ್ತರ ತಾಲೂಕು ತೊರೆನಾಗಸಂದ್ರ ನಿವಾಸಿ ಮಂಜುನಾಥ್​(45) ಮೃತ.ದಾಬಸ್​ಪೇಟೆ ಬಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್​ ಭಾನುವಾರ ರಾತ್ರಿ 10ಗಂಟೆ ಸುಮಾರಿನಲ್ಲಿ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ವಿಶ್ವೇಶ್ವರಪುರ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಟ್ರಾ$್ಯಕ್ಟರ್​ ತುಂಬಿಕೊಂಡು ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net