ಅಪಘಾತದಲ್ಲಿ ಬೈಕ್ ಸವಾರ ಸಾವು

03-AUG-GPT-1-SANJAY
ಸಂಜಯ್
Published on

ಗುಂಡ್ಲುಪೇಟೆ: ಪಟ್ಟಣದ ಹೊರವಲಯದಲ್ಲಿ ಎರಡು ಬೈಕ್‌ಗಳ ನಡುವೆ ನಡೆದ ಡಿಕ್ಕಿಯಲ್ಲಿ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟು, ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಲೂಕಿನ ದೇವರಹಳ್ಳಿ ಗ್ರಾಮದ ಪುಟ್ಟವೀರಪ್ಪ ಎಂಬುವರ ಪುತ್ರ ಸಂಜಯ್(20) ಮೃತ. ಮತ್ತೊಂದು ಬೈಕಿನಲ್ಲಿದ್ದ ಆನಂದ್ ಮತ್ತು ಸಿದ್ದೇಶ್ ಎಂಬುವರಿಗೂ ತೀವ್ರ ಪೆಟ್ಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಂಗಳ ರಸ್ತೆಯ ಪೆಟ್ರೋಲ್ ಬಂಕ್ ಎದುರು ಎರಡು ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net