ಅಪಘಾತದಲ್ಲಿ ಬೈಕ್ ಸವಾರ ಸಾವು

Accident sunil
ಸುನಿಲ್
Published on

ಸೊರಬ: ತಾಲೂಕಿನ ಉಳವಿ ಸಮೀಪದ ದೂಗೂರಿನಲ್ಲಿ ಬುಧವಾರ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಬೈಕ್ ಸವಾರ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾನೆ. ತಾಲೂಕಿನ ಗೆಂಡ್ಲಾ ಹೊಸೂರು ಗ್ರಾಮದ ಸುನೀಲ್ (23) ಮೃತ ಯುವಕ. ಉಳವಿಯಿಂದ ಸಾಗರದ ಕಡೆ ತೆರಳುತ್ತಿದ್ದ ಕಾರು ಮತ್ತು ಸಾಗರದಿಂದ ಸೊರಬದ ಕಡೆ ಸಾಗುತ್ತಿದ್ದ ಬೈಕ್ ನಡುವೆ ಅಪಘಾತವಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net