ಚಿಂತಾಮಣಿ: ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿ ಗುರುವಾರ ರಾತ್ರಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿ.ವಡ್ಡಹಳ್ಳಿಯ ರಘು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅಜಾಗೃತೆಯ ಚಾಲನೆಗೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಾಸ್ಥರು ಟಿಪ್ಪರ್ಗೆ ಕಲ್ಲು ತೂರಟ ನಡೆಸಿ ವಾಹನದ ಗಾಜು, ಹೆಡ್ ಲೈಟು ಧ್ವಂಸ ಮಾಡಿ, ವಾಹನದಲ್ಲಿದ್ದ ಸಾಮಗ್ರಿ ತೆಗೆದುಕೊಂಡು ಹೋಗಿದ್ದಾರೆ. ಸಂಧಾನದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ.