ಮಳವಳ್ಳಿ: ಪಟ್ಟಣದ ಅನಂತರಾಮ್ ವೃತ್ತದಲ್ಲಿ ಬುಧವಾರ ಬೆಳಗಿನ ಜಾವ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿದ್ದಾರೆ.
ತಾಲೂಕಿನ ಕಲ್ಲಾರೆಪುರ ಗ್ರಾಮದ ರುದ್ರೇಶ್ ಪ್ರಸಾದ್ ಗಾಯಗೊಂಡವರು. ಇವರು ಬೈಕ್‌ನಲ್ಲಿ ಪಟ್ಟಣ ಪೇಟೆ ಬೀದಿ ಕಡೆಗೆ ಹೋಗುತ್ತಿದ್ದಾಗ ಮದ್ದೂರು ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಾರಿದ ಬೈಕ್ ಸವಾರ ಕಾರಿನ ಬ್ಯಾನೆಟ್ ಮೇಲೆ ಬಿದ್ದು ತೀವ್ರ ರಕ್ತಸ್ರಾವವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ಸಮೀಪದಲ್ಲೇ ಇದ್ದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.