ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿ೦ದ ಬೈಕ್‌ಥಾನ್

30 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ನಗರದ ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್ ವತಿಯಿಂದ ಹೃದಯ ಆರೋಗ್ಯ ಹಾಗೂ ಹೃದಯಾಘಾತ ತಡೆಗಟ್ಟುವಿಕೆಯ ಮಹತ್ವ ತಿಳಿಸುವ ಉದ್ದೇಶದಿಂದ ಭಾನುವಾರ ಬೈಕ್‌ಥಾನ್ (ಬೈಕ್ ಜಾಥಾ) ಆಯೋಜಿಸಲಾಗಿತ್ತು. ಹು-ಧಾ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಮತ್ತು ಹುಬ್ಬಳ್ಳಿ ಗ್ರಾಮಾ0ತರ ಠಾಣೆಯ ಪೊಲೀಸ್ ನಿರೀಕ್ಷಕ ಮುರುಗೇಶ ಚನ್ನಣ್ಣವ ಚಾಲನೆ ನೀಡಿದರು.

ಎಸ್‌ಡಿಎಂ ಆಸ್ಪತ್ರೆಯಿಂದ ಪ್ರಾರಂಭವಾದ ಬೈಕ್ ಜಾಥಾ ಪಿ.ಬಿ. ರಸ್ತೆ, ಕೋರ್ಟ್ ಸರ್ಕಲ್, ಜ್ಯುಬಿಲಿ ಸರ್ಕಲ್ ಮತ್ತು ಕಾಲೇಜ್ ರಸ್ತೆಯ ಮೂಲಕ ಕರ್ನಾಟಕ ಕಾಲೇಜು ಆವರಣದಲ್ಲಿ ಸಮಾಪ್ತಿಗೊಂಡಿತು. ಸುಮಾರು 8.3 ಕಿ.ಮೀ ಜಾಥಾದಲ್ಲಿ 200ಕ್ಕೂ ಹೆಚ್ಚು ಬೈಕ್ ಸವಾರರು ಪಾಲ್ಗೊಂಡಿದ್ದರು. ಆಸ್ಪತ್ರೆಯ ವೈದ್ಯರು, ಸಿಬ್ಬಂದಿ, ಬೈಕರ್ ಗುಂಪುಗಳು, ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಆಸ್ಪತ್ರೆಯ ಹಿರಿಯ ಹೃದಯ ರೋಗ ತಜ್ಞ ಡಾ. ರಘು ಪ್ರಸಾದ್ ಮಾತನಾಡಿ, ಪ್ರತಿಯೊಬ್ಬರೂ ಆರೋಗ್ಯದ ಕಾಳಜಿ ವಹಿಸುವುದು ಸೂಕ್ತ. ಜತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದರು.

ಅರವಳಿಕೆ ತಜ್ಞ ಡಾ. ಗಣೇಶ ನಾಯಕ್ ಮಾತನಾಡಿ, ಪ್ರತಿಯೊಬ್ಬರ ಜೀವನಶೈಲಿ ಮತ್ತು ಆಹಾರ ಪದ್ಧತಿ ಚೆನ್ನಾಗಿರಬೇಕು. ಪ್ರತಿನಿತ್ಯ ಯೋಗ, ವ್ಯಾಯಾಮದಂತಹ ಚಟುವಟಿಕೆ ಮಾಡಬೇಕು ಎಂದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶಶಿಕುಮಾರ ಪಟ್ಟಣಶೆಟ್ಟಿ ಅವರು ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನ 16 ವರ್ಷಗಳ ಸಾಧನೆಯನ್ನು ವಿವರಿಸಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಕೀರ್ತಿ ಪಿ.ಎಲ್. ಮತ್ತು ನಿವೃತ್ತ ನ್ಯಾಯಮೂರ್ತಿ ಜಿ.ವಿ. ರಾಮನಗೌಡರ ವೇದಿಕೆಯಲ್ಲಿದ್ದರು. ಮಾರುಕಟ್ಟೆ ವಿಭಾಗದ ಉಪ ಮೇಲ್ವಿಚಾರಕ ದುಂಡೇಶ ತಡಕೋಡ ನಿರೂಪಿಸಿದರು. ಹಿರಿಯ ಮೇಲ್ವಿಚಾರಕ ಅಜೇಯ ಹುಲಮನಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net