ಬಿಲಾಸ್ಪುರ ರೈಲು ಅಪಘಾತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ, 20 ಮಂದಿಗೆ ಗಾಯ | Bilaspur train accident

Bilaspur train accident
Published on

ರಾಯ್​ಪುರ: ಛತ್ತೀಸ್‌ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಪ್ಯಾಸೆಂಜರ್​ ರೈಲು(Bilaspur train accident) ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಿದ್ದು. ಇಲ್ಲಿಯವರೆಗೆ, 11 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಪ್ರಾಥಮಿಕ ತನಿಖೆಯಲ್ಲಿ MEMU ಲೋಕಲ್ ರೈಲು ಸಿಗ್ನಲ್ ದಾಟಿ ಗೂಡ್ಸ್ ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯ ಪರಿಣಾಮ ತೀವ್ರವಾಗಿದ್ದು, ಓವರ್‌ಹೆಡ್ ವೈರ್‌ಗಳು ಮತ್ತು ಸಿಗ್ನಲಿಂಗ್ ವ್ಯವಸ್ಥೆಗೆ ಹಾನಿಯಾಗಿದೆ. ಅಪಘಾತದ ನಂತರ, ರೈಲ್ವೆ ರಕ್ಷಣಾ ಸಿಬ್ಬಂದಿಗಳು, ಆರ್‌ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ತಲುಪಿ ಪರಿಹಾರ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದರು.

ಅಪಘಾತವಾದ ಗಾಯಾಳುಗಳಿಗೆ ತುರ್ತು ವೈದ್ಯಕೀಯ ತಂಡಗಳು ಚಿಕಿತ್ಸೆ ನೀಡಿದ್ದು, ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದರು. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ರೈಲು ದುರಂತದಲ್ಲಿ ಮೃತಪಟ್ಟ ಹತ್ತಿರದ ಸಂಬಂಧಿಕರಿಗೆ 10 ಲಕ್ಷ ರೂ, ಗಂಭೀರವಾಗಿ ಗಾಯಗೊಂಡವರಿಗೆ 5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದ ಪ್ರಯಾಣಿಕರಿಗೆ 1 ಲಕ್ಷ ಪರಿಹಾರವನ್ನು ರೈಲ್ವೆ ಆಡಳಿತ ಘೋಷಿಸಿದೆ. ಈ ಘಟನೆಯ ಬಗ್ಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಮತ್ತು ಪರಿಹಾರ ಕ್ರಮಗಳನ್ನು ಸೂಚಿಸಲು ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್) ವಿವರವಾದ ತನಿಖೆ ನಡೆಸಲಿದ್ದಾರೆ.

ಪ್ರಯಾಣಿಕರು ಮತ್ತು ಸಂಬಂಧಿಕರು ಮಾಹಿತಿ ಪಡೆಯಲು ಸಹಾಯವಾಣಿ ಸಂಖ್ಯೆಗಳನ್ನು ನೀಡಿದ ರೈಲ್ವೆ ಅಡಳಿತ

ಬಿಲಾಸ್ಪುರ್: 7777857335, 7869953330

ಚಂಪಾ: 8085956528

ರಾಯಗಢ: 9752485600

ಪೆಂಡ್ರಾ ರಸ್ತೆ: 8294730162

ಕೋರ್ಬಾ: 7869953330

ಉಸಲಾಪುರ: 7777857338

ಅಪಘಾತ ನಡೆದ ಸ್ಥಳದಲ್ಲಿ: 9752485499, 8602007202

ಪ್ರಯಾಣಿಕರು ಮತ್ತು ಅವರ ಕುಟುಂಬ ಸದಸ್ಯರು ಸಹಾಯ ಮತ್ತು ಮಾಹಿತಿಗಾಗಿ ಈ ಸಂಖ್ಯೆಗಳಿಂದ ಸಂಪರ್ಕಿಸಬಹುದು. ರೈಲ್ವೆ ಆಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ಬೆಂಬಲ ಮತ್ತು ವೈದ್ಯಕೀಯ ಸಹಾಯವನ್ನು ಖಚಿತಪಡಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net