ದ್ವಿಭಾಷಾ ನೀತಿ ಜಾರಿಗೊಳಿಸಲು ಕರವೇ ಒತ್ತಾಯ

7-RNR-04
filter: 0; fileterIntensity: 0.0; filterMask: 0; module: h; hw-remosaic: 0; touch: (-1.0, -1.0); modeInfo: ; sceneMode: Hdr; cct_value: 0; AI_Scene: (200, -1); aec_lux: 202.73064; hist255: 0.0; hist252~255: 0.0; hist0~15: 0.0;
Published on

ರಾಣೆಬೆನ್ನೂರ: ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಟಕದ ವತಿಯಿಂದ ಸೋಮವಾರ ತಾಲೂಕಿನ ಕೋಡಿಯಾಲ ಹೊಸಪೇಟೆ ಗ್ರಾಪಂ ಪಿಡಿಒ ದೇವರಾಜ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಇಂಗ್ಲಿಷ್​ಅನ್ನು ದ್ವೀತಿಯ ಹಾಗೂ ಹಿಂದಿಯನ್ನು ತೃತೀಯ ಭಾಷೆಯನ್ನಾಗಿ ಕಲಿಸಲಾಗುತ್ತಿದೆ. ರಾಜ್ಯದ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ. ಅಲ್ಲದೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಿದೆ. ಕರ್ನಾಟಕ ಶಾಲೆಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್​ ಭಾಷೆಗಳನ್ನು ಕಡ್ಡಾಯಗೊಳಿಸುವ ದ್ವಿಭಾಷಾ ನೀತಿ ಜಾರಿಗೆ ತರಬೇಕು. ತೃತೀಯ ಭಾಷೆಯಾದ ಹಿಂದಿಯನ್ನು ಪಠ್ಯಕ್ರಮದಿಂದ ಹೊರಗಿಡಬೇಕು ಎಂದು ಒತ್ತಾಯಿಸಿದರು. ಪ್ರಮುಖರಾದ ಕೋಟ್ರೇಶ, ಚಂದ್ರಕಲಾ ಹೆಗ್ಗಪ್ಪನವರ, ಬಿ.ಪಿ. ಬಸವರಾಜ, ಅನಿಲಕುಮಾರ ಮಾಳಗೇರ, ಮಹೇಶಪ್ಪ ಬೋಸ್ಲೆ, ಲತಾ ಜಿ.ಎಂ., ರುದ್ರಪ್ಪ ಚಕ್ರಸಾಲಿ, ಅಕ್ಕಮ್ಮ, ಶಿವಕುಮಾರ ಹೆಗ್ಗಪ್ಪನವರ, ಸಾವಿತ್ರಮ್ಮ, ಶೈಲಾ, ಅನುಷಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net