

ಚಿತ್ರದುರ್ಗ: ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯದ ನಿರ್ದೇಶನದಂತೆ ರಾಷ್ಟ್ರ ವಿದ್ಯಾರ್ಥಿ ವೇತನ (ಎನ್‌ಎಸ್‌ಪಿ) ಯೋಜನೆಯಡಿ ಮೆರಿಟ್ ಕಂ.ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ಎಲ್ಲ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾ ರ್ಥಿಗಳು ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಮಾಡಬೇಕು.
ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ವಿದ್ಯಾರ್ಥಿಗಳು ಶಾಲಾ, ಕಾಲೇಜು ಮುಖ್ಯ ಶಿಕ್ಷಕರು, ಪ್ರಾಂಶುಪಾಲರನ್ನು ಭೇಟಿ ಮಾಡಿ ಸ್ಥಳ, ಸಮಯ, ದಿನಾಂಕವನ್ನು ತಿಳಿದುಕೊಳ್ಳಬೇಕು.
ಆಧಾರ್ ಕಾರ್ಡ್ ಹಾಗೂ ದಾಖಲೆಗಳೊಂದಿಗೆ ಖುದ್ದು ಹಾಜರಾಗಿ ಕಡ್ಡಾಯವಾಗಿ ಬಯೋಮೆಟ್ರಿಕ್ ದೃಢೀಕರಣ ಸಲ್ಲಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿ ವೇತನ ಸಿಗದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಕಚೇರಿ ಪ್ರಕಟಣೆ ತಿಳಿಸಿದೆ.