

ಬೆಂಗಳೂರು: ಬಿಪರ್ಜಾಯ್ ಚಂಡಮಾರುತದ ಪರಿಣಾಮವಾಗಿ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆ ಇದ್ದು ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು.
ಮುಂದಿನ 5 ದಿನ ಬೆಂಗಳೂರಿನ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದ್ದು ಸುಮಾರು 60 ರಿಂದ 65 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು. ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಜೂನ್ 19 ರವರೆಗೆ ಹವಾಮಾನ ಇಲಾಖೆ ಮಳೆ ಅಲರ್ಟ್ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಸೇರಿ ಹಲವೆಡೆ ಮಳೆಯಾಗಬಹುದು.