ರಕ್ತದಾನ ಶಿಬಿರದಿಂದ ಜನ್ಮದಿನಾಚರಣೆ ಸಾರ್ಥಕ್ಯ

sgr sudeep
ಸಾಗರದ ರೋಟರಿ ರಕ್ತನಿಧಿ ಕೇಂದ್ರದಲ್ಲಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಿಂದ ಆಯೋಜಿಸಿದ್ದ ರಕ್ತದಾನ ಶಿಬಿರವನ್ನು ರೋಟರಿ ರತನ್, ಕೇಂದ್ರದ ಗೌರವಾಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು ಉದ್ಘಾಟಿಸಿದರು.
Published on

ಸಾಗರ: ಸೆಲೆಬ್ರಿಟಿಗಳ ಜನ್ಮದಿನ ಅರ್ಥಪೂರ್ಣಗೊಳಿಸಲು ರಕ್ತದಾನದಂತಹ ಸೇವಾ ಕಾರ್ಯ ಅಗತ್ಯ. ಇದರಿಂದ ಸಮಾಜದಲ್ಲಿ ಇನ್ನೊಬ್ಬರಿಗೂ ಸಹಕಾರವಾಗುತ್ತದೆ ಎಂದು ರೋಟರಿ ರಕ್ತನಿಧಿ ಕೇಂದ್ರದ ಗೌರವಾಧ್ಯಕ್ಷೆ ಡಾ. ರಾಜನಂದಿನಿ ಕಾಗೋಡು ಹೇಳಿದರು.

ಸಾಗರದ ರೋಟರಿ ರಕ್ತನಿಧಿ ಕೇಂದ್ರದಲ್ಲಿ ನಟ ಕಿಚ್ಚ ಸುದೀಪ್ ಜನ್ಮದಿನದ ಪ್ರಯುಕ್ತ ತಾಲೂಕು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇನಾ ಸಮಿತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಯುವಜನರು ಸಂಘ ಸಂಸ್ಥೆಗಳ ಮೂಲಕ ರಕ್ತದಾನ ಮಾಡುವುದರಿಂದ ತುರ್ತು ಸಂದರ್ಭದಲ್ಲಿ ರಕ್ತ ಪೂರೈಕೆ ಮಾಡಲು ಅನುಕೂಲವಾಗುತ್ತದೆ. ರಕ್ತದಾನ ಮಾಡುವುದು ಸಾಮಾಜಿಕ ಜವಾಬ್ದಾರಿಯೂ ಹೌದು. ರಕ್ತದಾನ ಮಾಡುತ್ತಿರುವುದು ಚಿತ್ರನಟನ ಜನ್ಮದಿನಕ್ಕೆ ಅರ್ಥ ಬಂದಿದೆ ಎಂದರು.

ಇತ್ತೀಚೆಗೆ ರಕ್ತದಾನ ಮಾಡುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ರಕ್ತದ ಬೇಡಿಕೆ ಜಾಸ್ತಿಯಾಗುತ್ತಿದೆ. ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎನ್ನುವ ಅರ್ಥವಿಲ್ಲದ ಹೇಳಿಕೆಗಳು ರಕ್ತದಾನದಿಂದ ಹಿಂದೆ ಸರಿಯಲು ಕಾರಣವಾಗಿದೆ. ರಕ್ತದಾನ ಮಾಡುವುದರಿಂದ ಆರೋಗ್ಯ ಸುಧಾರಿಸುತ್ತದೆ ಎನ್ನುವುದು ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.

ಸೇನಾ ಸಮಿತಿ ಉಪಾಧ್ಯಕ್ಷ ಸುದೀಪ್, ರಕ್ತನಿಧಿ ಕೇಂದ್ರದ ಶಾಂತಕುಮಾರ್, ಡಾ. ಸಚಿನ್, ಸುನೀಲ್ಕುಮಾರ್ ಇತರರಿದ್ದರು. ಇದಕ್ಕೂ ಮೊದಲು ಮಹಾಗಣಪತಿ, ಮಾರಿಕಾಂಬಾ ದೇವಸ್ಥಾನದಲ್ಲಿ ನಟ ಸುದೀಪ್ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net