ಶ್ರಮಜೀವಿ ಮುಖ್ಯಮಂತ್ರಿ ಯಡಿಯೂರಪ್ಪ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು: ಟ್ವೀಟ್ ಮೂಲಕ ಶುಭ ಕೋರಿದ ಪ್ರಧಾನಿ ಮೋದಿ

modi 27 Feb 20
Published on

ನವದೆಹಲಿ: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಬಿ.ಎಸ್​. ಯಡಿಯೂರಪ್ಪ ಜೀ ಅವರು ಕರ್ನಾಟಕದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ರೈತರ ಕಲ್ಯಾಣ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಶ್ರಮಜೀವಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ.

ಬಿ.ಎಸ್​.ಯಡಿಯೂರಪ್ಪನವರು ಮೊನ್ನೆ ಫೆ.25ರಂದು ದೆಹಲಿಗೆ ತೆರಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net