ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಅಧಿಕಾರ, ಸಿ ವೋಟರ್ ಸಮೀಕ್ಷೆ ವರದಿ

WhatsApp Image 2021-11-13 at 11.28.05 PM
Published on

ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಅಧಿಕಾರ ಉಳಿಸಿಕೊಂಡರೂ, ಈಗಿರುವ ನೂರಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಎಬಿಸಿ-ಸಿವೋಟರ್ ಸಮೀಕ್ಷೆ ಹೇಳಿದೆ.

ಒಟ್ಟು ಐದು ರಾಜ್ಯಗಳಲ್ಲಿ ಚುನಾವಣೆ ನಡೆಯಲಿದ್ದು ಬಿಜೆಪಿ ಹಾಗೂ ಮಿತ್ರ ಪಕ್ಷಗಳಿಗೆ ಅಧಿಕಾರದ ಹಾದಿ ಅಷ್ಟು ಸುಲಭವಲ್ಲ ಎಂದು ಸಮೀಕ್ಷೆ ಫಲಿತಾಂಶ ಅಭಿಪ್ರಾಯಪಟ್ಟಿದೆ. ರಾಜಕೀಯ ಮಹತ್ವದ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳುತ್ತದಾದರೂ ಅದು ಹಾಲಿ ಹೊಂದಿರುವ ಸುಮಾರು 100 ಕ್ಕೂ ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷದ ಸಾಧನೆ ನೀರಸವಾಗಿರುತ್ತದೆ. ಪಂಜಾಬ್​ನಲ್ಲಿ ಬಿಜೆಪಿ ಮತ್ತದರ ಮಿತ್ರಪಕ್ಷಗಳು ಒಂದೇ ಒಂದು ಸ್ಥಾನದಲ್ಲೂ ಗೆಲ್ಲುವ ನಿರೀಕ್ಷೆಯಿಲ್ಲ. ಆಮ್ ಆದ್ಮಿ ಪಕ್ಷ (ಆಪ್) ಮತ್ತು ಕಾಂಗ್ರೆಸ್ ತೀವ್ರ ಹಣಾಹಣಿ ನಡೆಸಲಿವೆ. ಎರಡೂ ಪಕ್ಷಗಳು ಸರ್ಕಾರ ರಚಿಸುವಷ್ಟು ಸರಳ ಬಹುಮತ ಪಡೆಯಲಾರವು ಎಂದೂ ಸಮೀಕ್ಷೆ ಹೇಳಿದೆ.

ಅಮಿತ್ ಷಾ ಸಭೆ: ಶುಕ್ರವಾರ ವಾರಾಣಸಿಯಲ್ಲಿ ನಡೆದ ಪಕ್ಷದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಷಾ, ‘ಬೂತ್​ಗಳನ್ನು ಗೆಲ್ಲಿ, ಉತ್ತರ ಪ್ರದೇಶ ಗೆಲ್ಲಿ’ ಮಂತ್ರವನ್ನು ಮುಂದಿಟ್ಟಿದ್ದಾರೆ. ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ಸಿಗಲಿರುವ ಗೆಲುವು 2024ರ ಲೋಕಸಭೆ ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net