ಸೋತ ಕ್ಷೇತ್ರಗಳ ಬಗ್ಗೆ ಅವಲೋಕನ ಸಭೆ; ಸೋತಲ್ಲಿಯೇ ಗೆಲ್ಲಲು ಕರೆ

CCC-BJP
Published on

ಬೆಂಗಳೂರು:
ಸೋತ ತಕ್ಷಣ ಧೃತಿಗೆಡುವುದು ಬೇಡ. ಸೋಲನ್ನೆ ಗೆಲುವಿನ ಮೆಟ್ಟಿಲಾಗಿಸಿಕೊಳ್ಳಲು ಸಂಘಟಿತ ಪ್ರಯತ್ನ ನಡೆಸುವಂತೆ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ ನೀಡಿದ್ದಾರೆ.
ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯದಲ್ಲಿ ಸೋತ ವಿವಿಧ ಲೋಕಸಭಾ ಕ್ಷೇತ್ರಗಳ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಸೋಲಾಗಿದೆ ಎನ್ನುವ ಮಾಹಿತಿ ತಮ್ಮ ಅನುಭವಕ್ಕೆ ಬಂದಿದೆ. ಆದರೆ, ಸೋತಲ್ಲಿಯೇ ನಾವು ಮುಂದೆ ಗೆಲ್ಲಬೇಕಾದ ಗುರಿ ಇಟ್ಟುಕೊಂಡು ಪ್ರಯತ್ನಶೀಲರಾಗೋಣ ಎಂದರು.
ರಾಜ್ಯ ಚುನಾವಣಾ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲು ರಾಜ್ಯದ ಕೊಡುಗೆಯೂ ಮಹತ್ವದಿದೆ. ಅದಕ್ಕಾಗಿ ಅಭಿನಂದನೆ ಸಲ್ಲಿಸುವೆ ಎಂದರು.
ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಎಲ್ಲರೂ ಮುಂದಾಗಬೇಕು ಎಂದು ಕರೆ ನೀಡಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಮತ್ತು ವಿವಿಧ ಕ್ಷೇತ್ರಗಳ ಪ್ರಮುಖರು ಮತ್ತು ಅಪೇಕ್ಷಿತರು ಉಪಸ್ಥಿತರಿದ್ದರು. ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ಕಲಬುರ್ಗಿ ಕ್ಷೇತ್ರಗಳ ಕುರಿತು ಸಭೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net