ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸಿಎಂ ಮನೆ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ಕಾರ್ಯಕರ್ತರ ಬಂಧನ

Published on

ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪೊಲೀಸರು ಅವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.
ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ನೇತೃತ್ವದಲ್ಲಿ ಮುಡಾ ಹಗರಣವನ್ನು ಪ್ರಸ್ತಾಪಿಸಿ ೋಷಣೆ ಕೂಗುತ್ತಾ ಹೊರಟ ಪ್ರತಿಭಟನಾಕಾರರು, ಗೃಹ ಕಚೇರಿ ಕೃಷ್ಣ ಗೇಟ್ ಬಳಿ ಆಗಮಿಸುತ್ತಿದ್ದಂತೆ ಪೊಲೀಸ್ ಬ್ಯಾರಿಕೇಡ್ ಹಾಕಿ ತಡೆದರು. ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ೋಷಣೆ ಕೂಗುತ್ತ ಮುನ್ನುಗ್ಗಲೆತ್ನಿಸಿದ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.
ಬಿಜೆಪಿ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಬಿಜೆಪಿ ಮಾಧ್ಯಮ ಸಹ ಸಂಚಾಲಕ ಪ್ರಶಾಂತ್ ಕೆಡೆಂಜಿ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ದೀಪಕ್, ಉಪಾಧ್ಯಕ್ಷ ಮಾಲತೇಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಅಭಿಲಾಷ್ ರೆಡ್ಡಿ, ರಾಮನಗರ ಜಿಲ್ಲಾಧ್ಯಕ್ಷ ಜಗನ್ನಾಥ ಗೌಡ, ಕಾರ್ಯಾಲಯ ಸಹ ಕಾರ್ಯದರ್ಶಿ ಬಾಲಾಜಿ, ಕಾರ್ಯಕರ್ತರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net