ಭೂಕುಸಿತದ ಸ್ಥಳಕ್ಕೆ ಭೇಟಿ ನೀಡಿದ ಬಿಜೆಪಿ ನಿಯೋಗದ ಮೇಲೆ ದಾಳಿ; ಸಂಸದ ಖಗೇನ್ ಮುರ್ಮುಗೆ ಗಂಭೀರ ಗಾಯ| MP Khagen Murmu

Untitled design - 2025-10-06T200905.689
Published on

MP Khagen Murmu: ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ ಮತ್ತು ಪ್ರವಾಹದ ಬಳಿಕ ಪರಿಹಾರ ಕಾರ್ಯದ ಮೇಲ್ವಿಚಾರಣೆ ನಡೆಸಲು ತೆರಳಿದ್ದ ಬಿಜೆಪಿ ನಿಯೋಗದ ಮೇಲೆ ಅಪರಿಚಿತ ವ್ಯಕ್ತಿಗಳಿಂದ ದಾಳಿ ನಡೆದಿದೆ. ಘಟನೆಯಲ್ಲಿ ಮಾಲ್ಡಾ ಸಂಸದ ಖಗೇನ್ ಮುರ್ಮು ಮುಖಕ್ಕೆ ಗಂಭೀರವಾಗಿದೆ ಎಂದು ಸೋಮವಾರ(ಅ. 06) ವರದಿಯಾಗಿದೆ.

ಜುಲ್ಪೈಗುರಿಯಲ್ಲಿ ದಾಳಿ ನಡೆದಿದ್ದು, ನಿಯೋಗದಲ್ಲಿದ್ದ ಸಂಸದ ಖಗೇನ್ ಮುರ್ಮು, ಸಿಲಿಗುರಿ ಶಾಸಕ ಶಂಕರ್ ಘೋಷ್ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದಾಳಿಯಲ್ಲಿ ಇಬ್ಬರು ನಾಯಕರು ಪ್ರಯಾಣಿಸುತ್ತಿದ್ದ ವಾಹನಗಳು ಸಹ ಹಾನಿಗೊಳಗಾಗಿವೆ ಎನ್ನಲಾಗಿದೆ.

ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಘಟನೆಯ ಹಿಂದೆ ಪಶ್ಚಿಮ ಬಂಗಾಳದ ಆಡಳಿತರೂಢ ಟಿಎಂಸಿ ಪಕ್ಷದ ಕೈವಾಡವಿದೆ ಎಂದು ಆರೋಪಿಸಿದೆ.

ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ, ಉತ್ತರ ಮಾಲ್ಡಾದಿಂದ ಎರಡು ಬಾರಿ ಸಂಸದರಾಗಿದ್ದ ಖಗೆನ್ ಮುರ್ಮು ಅವರ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದ್ದಾರೆ. ಪ್ರವಾಹದಿಂದ ತತ್ತರಿಸಿರುವ ಜನರಿಗೆ ಪರಿಹಾರ ನೀಡಬೇಕೆಂಬ ಬಗ್ಗೆ ಟಿಎಂಸಿ ಮತ್ತು ರಾಜ್ಯ ಸರ್ಕಾರ ಗಮನ ಹರಿಸುತ್ತಿಲ್ಲ. ಕೋಲ್ಕತ್ತಾದ ಕಾರ್ನೀವಲ್‌ನಲ್ಲಿ ಮಮತಾ ಬ್ಯಾನರ್ಜಿ ನೃತ್ಯ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಮಾತ್ರ ಸಂತ್ರಸ್ತರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಖಗೇನ್ ಮುರ್ಮು ಎರಡನೇ ಬಾರಿಗೆ ಮಾಲ್ಡಾ ಉತ್ತರ ಲೋಕಸಭಾ ಕ್ಷೇತ್ರವನ್ನು ಸಂಸದರಾಗಿ ಪ್ರತಿನಿಧಿಸುತ್ತಿದ್ದಾರೆ. ಅವರು 2006 ರಿಂದ 2019 ರವರೆಗೆ ಹಬೀಬ್‌ಪುರ ಕ್ಷೇತ್ರದ ಶಾಸಕರಾಗಿದ್ದರು. ಮೂಲತಃ ಸಿಪಿಎಂ ಪಕ್ಷದ ನಾಯಕರಾಗಿದ್ದ ಅವರು 2019ರಲ್ಲಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net