ಹಲ್ಲೆಗೈದವರ ವಿರುದ್ಧ ಕ್ರಮಕ್ಕೆ ಬಿಜೆಪಿ ಒತ್ತಾಯ

bjp
ಹಿಂದುಗಳ ಮೇಲೆ ಹಲ್ಲೆ ನಡೆಸುತ್ತಿರುವ ಗೂಂಡಾಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಡಿ.ಮೋಹನ್ ರೆಡ್ಡಿ, ದೀನದಯಾಳು, ಸುರೇಖಾ ಮುರಳೀಧರ್, ಸುಧಾಮಣಿ, ಎಸ್.ಜ್ಞಾನೇಶ್ವರ್ ಮುಂತಾದವರು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಹಿಂದುಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಿರುವ ಮುಸ್ಲಿಂ ಗೂಂಡಾಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ನಗರ ಬಿಜೆಪಿ ಘಟಕದ ಪ್ರಮುಖರು ಗುರುವಾರ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್‌ಗೆ ಮನವಿ ಸಲ್ಲಿಸಿದರು.

ಇತ್ತೀಚೆಗೆ ಹಿಂದುಗಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿದೆ. ಮುಸ್ಲಿಂ ಗೂಂಡಾಗಳು ಹೆಣ್ಣು ಮಕ್ಕಳಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದಾರೆ. ಮೇ 27ರ ರಾತ್ರಿ 8.30ರ ಸುಮಾರಿಗೆ ಬಾಪೂಜಿನಗರದ ಎರಡನೇ ತಿರುವಿನಲ್ಲಿ ಹಿಂದುವಿನ ಮೇಲೆ ಮುಸ್ಲಿಂ ಗೂಂಡಾಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ದೂರಿದರು.

ನಾಗರಾಜ್ ಎಂಬ ಪೌರಕಾರ್ಮಿಕ ಪತ್ನಿ ರೋಹಿಣಿ ಜತೆ ಇರುವಾಗಲೇ ಜಾತಿನಿಂದನೆ ಮಾಡಿ ಹಲ್ಲೆ ಮಾಡಲಾಗಿದೆ. ಆತನ ಪತ್ನಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಪದೇಪದೆ ಹಿಂದುಗಳ ಮೇಲೆ ಹಲ್ಲೆ ನಡೆಯುತ್ತಲೇ ಇದೆ. ಗಾಂಧಿ ಬಜಾರ್‌ನಲ್ಲಿ ಹಿಂದು ಯುವಕರ ಮೇಲೆ ಹಲ್ಲೆ ನಡೆಸಲಾಗಿತ್ತು. ಮುಸ್ಲಿಂ ಗೂಂಡಾಗಳ ಮೇಲೆ ಕಾನೂನು ಕ್ರಮ ತೆಗೆದುಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಕೆ.ಮಂಜುನಾಥ್, ಎಚ್.ಕೆ.ದೀನದಯಾಳು, ಪ್ರಮುಖರಾದ ಎಸ್.ಜ್ಞಾನೇಶ್ವರ್, ಪ್ರಭಾಕರ್, ಸುರೇಖಾ ಮುರಳೀಧರ್, ರಂಗೇಶ್, ಸುಧಾಮಣಿ, ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net