ಮೈಷುಗರ್ ಕಾರ್ಖಾನೆ ಪ್ರಾರಂಭಿಸಲಿ: ಬಿಜೆಪಿ ರೈತ ಮೋರ್ಚಾದಿಂದ ಡಿಸಿಗೆ ಮನವಿ

BJP demands to start Mysugar factory Mandya
Published on

ಮಂಡ್ಯ: ಶೀಘ್ರ ಮೈಷುಗರ್ ಪ್ರಾರಂಭಿಸಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಕಾರ್ಯವನ್ನು ಆರಂಭ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಪದಾಧಿಕಾರಿಗಳು, ಸಾಮಾನ್ಯವಾಗಿ ಮೈಷುಗರ್ ಕಾರ್ಖಾನೆಯನ್ನು ಮೇ ಅಥವಾ ಜೂನ್ ಮೊದಲ ವಾರದಲ್ಲಿ ಪ್ರಾರಂಭಿಸಲಾಗುತ್ತಿತ್ತು. ಆದರೆ ಜೂನ್ 2ನೇ ವಾರ ಮುಗಿಯುತ್ತಿದ್ದರೂ ಸಹ ಇನ್ನೂ ಪ್ರಾರಂಭವಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ ಎಂದು ಆರೋಪಿಸಿದರು.

ಮೈಷುಗರ್ ಕಾರ್ಖಾನೆ ಪ್ರಾರಂಭವಾಗದಿರುವುದರಿಂದ ರೈತರಿಗೆ ತುಂಬಾ ತೊಂದರೆಯುಂಟಾಗಿದೆ. ಬೆಳೆದು ನಿಂತಿರುವ ಕಬ್ಬನ್ನು ಕಟಾವು ಮಾಡಲು ಅನುಮತಿ ನೀಡಬೇಕಾಗಿದೆ. ಮೈಷುಗರ್ ಕಾರ್ಖಾನೆ ಶೀಘ್ರ ಪ್ರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಈ ವಾರದಲ್ಲಿ ಮೈಷುಗರ್ ಪ್ರಾರಂಬಿಸದೆ ವಿಳಂಬ ಮಾಡಿದಲ್ಲಿ ರೈತರೊಂದಿಗೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ರಾಜ್ಯ ಕಾರ್ಯದರ್ಶಿ ಎಚ್.ಆರ್ ಅಶೋಕ್ ಕುಮಾರ್, ಜವರೇಗೌಡ, ಪ್ರಸನ್ನ ಕುಮಾರ್, ವಿನಯ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net