ಶಾಸಕ ಮುನಿರತ್ನಗೆ ಬಿಜೆಪಿ ಶಿಸ್ತು ಸಮಿತಿ ಶಾಕ್ !

Muniratna
Published on

ಬೆಂಗಳೂರು: ಜಾತಿ ನಿಂದನೆ, ಲಂಚ ಆರೋಪದಡಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಪ್ರಕರಣ ದಾಖಲಾಗಿರುವ ಬೆನ್ನಲೇ ಬಿಜೆಪಿ ರಾಜ್ಯ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿ, ಈ ವಿಷಯಕ್ಕೆ ಸಂಬಂಧಿಸಿದಂತೆ ಸಮಜಾಯಿಷಿ ನೀಡಲು ತಿಳಿಸಿದೆ.

ಪ್ರಕರಣ ದಾಖಲಿಸಿಕೊಂಡಿರುವ ವೈಯಾಲಿಕಾವಲ್ ಠಾಣೆ ಪೊಲೀಸರು ಶನಿವಾರ ತಮ್ಮ ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಎದುರಿಸುತ್ತಿರುವ ಈ ಸಂಕಷ್ಟದ ನಡುವೆ ಆರೋಪಗಳಿಗೆ ಸ್ಪಷ್ಟೀಕರಣ ಕೇಳಿ ಪಕ್ಷದ ರಾಜ್ಯದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ನೋಟಿಸ್ ನೀಡಿದ್ದಾರೆ.

ಮುನಿರತ್ನ ಅವರದ್ದು ಎನ್ನಲಾದ ಆಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಜತೆಗೆ ಎ್ಐಆರ್ ಕೂಡ ದಾಖಲಾಗಿದ್ದು, ಪಕ್ಷದ ಶಿಸ್ತಿಗೆ ಧಕ್ಕೆಯನ್ನುಂಟು ಮಾಡಿದೆ. ಈ ನೋಟಿಸ್ ತಲುಪಿದ ಐದು ದಿನಗಳೊಳಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಬೇಕು ಎಂದು ಮುನಿರತ್ನಗೆ ಶಿಸ್ತು ಸಮಿತಿ ಜಾರಿಗೊಳಿಸಿದ ನೋಟಿಸ್‌ನಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net