ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಪ್ರಗತಿ ಪರಿಶೀಲಿಸಿದ ನಾಲ್ವರು ಸಚಿವರು

Published on

ಬೆಂಗಳೂರು:
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಬಗ್ಗೆ ತನಿಖೆಯ ಪ್ರಗತಿ ಏನಾಗಿದೆ ಎನ್ನುವ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು.
ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಪ್ರಿಯಾಂಕ ಖರ್ಗೆ, ಕೃಷ್ಣಭೈರೇಗೌಡ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಹಗರಣ, 40 ರ್ಸಂಟ್ ಹಗರಣ ಸೇರಿದಂತೆ ಹಲವು ಹಗರಣಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ಜನರ ಮುಂದೆ ತೆರದಿಡುವುದು ನಮ್ಮ ಜವಬ್ದಾರಿ ಇದೆ. ಆದ್ದರಿಂದ ಈ ಬಗ್ಗೆ ನಿರ್ಲಕ್ಷ್ಯ ತೋರಿಸದೆ ತನಿಖೆ ಪ್ರಗತಿಯ ಮಾಹಿತಿಯನ್ನು ಸಮಿತಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ.
ಸಭೆಯಲ್ಲಿ ಏನೇನು ಚರ್ಚೆ ನಡೆದಿದೆ ಎಂದು ಸುದ್ದಿಗಾರರಿಗೆ ತಿಳಿಸಲು ನಾಲ್ವರು ಸಚಿವರು ನಿರಾಕರಿಸಿದರು. ತನಿಖೆಯ ಪ್ರಗತಿಯ ವೇಗವನ್ನು ಹೆಚ್ಚಿಸಿ, ಆದಷ್ಟು ಬೇಗ ವರದಿಯನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net