

ಬೆಂಗಳೂರು: ಬಿಜೆಪಿಗೆ ನಾಚಿಕೆಯಾಗಬೇಕು. ನಾವು ಕೊಟ್ಟ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಅವರ ಕಾಲದ ಬಜೆಟ್ ರೀತಿ ನಮ್ಮದು ಇರುವುದಿಲ್ಲ. ಕೇಂದ್ರ ಬಜೆಟ್ ಅಲ್ಲಿ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಅವರಿಗೆ ನೈತಿಕತೆಯಿಲ್ಲ. ನಾವು ನಮ್ಮ ಜನರನ್ನು ಕಾಪಾಡುತ್ತೇವೆ, ಕಾಪಾಡಿದ್ದೇವೆ ಎಂದು ಡಿಸಿಎಂ DK ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ ಎಂದರು.
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನುಉಳಿಸಿಕೊಂಡಿದೆ, ಉತ್ತಮವಾದ ಬಜೆಟ್ ನೀಡುತ್ತಿದ್ದಾರಲ್ಲ ಎನ್ನುವ ಹೊಟ್ಟೆಯುರಿ. ನೆನ್ನೆ ವಿರೋಧ ಪಕ್ಷಗಳ ಶಾಸಕರು ಕೇವಲ ಫೋಟೋಗಾಗಿ ಮಾತ್ರ ಬಂದಿದ್ದರು. ಏನನ್ನೂ ಕೇಳಲು ಬಂದಿರಲಿಲ್ಲ. ಮುಖ್ಯಮಂತ್ರಿಗಳು ಇಲಾಖೆಗೆ ಏನು ಕೊಡಬೇಕು ಎಂದು ಸಚಿವರ ಬಳಿ ಚರ್ಚೆ ಮಾಡಿಯೇ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.