ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ ಬೇರೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್, ಈಗ ಬೇರೆ ಹೇಳುತ್ತಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು ಎಂದರು.