ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಜಿಲ್ಲೆಯ ಕಾರ್ಯಕರ್ತರು ಭಾಗಿ; ಮಂಜುನಾಥ ಗೌಡಶಿವಣ್ಣನವರ

6-RNR-03 manjunath
Published on

ಹಾವೇರಿ: ಮೈಸೂರು ನಗರಾಭಿವೃದ್ಧಿ ಪ್ರಾಽಕಾರದ (ಮುಡಾ) ಅಕ್ರಮವನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ಮೈಸೂರು ವರೆಗೆ ಪಾದಯಾತ್ರೆ ನಡೆಸಲಾಗುತ್ತಿದ್ದು, ಆ. ೯ ಮತ್ತು ೧೦ರಂದು ಜಿಲ್ಲೆಯ ಜೆಡಿಎಸ್ ಪಕ್ಷದ ಪದಾಽಕಾರಿಗಳು, ಕಾರ್ಯಕರ್ತರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಽಕಾರಕ್ಕೆ ಬಂದ ದಿನಗಳಿಂದ ಸರ್ಕಾರದ ಒಂದಿಲ್ಲೊAದು ಭ್ರಷ್ಟಾಚಾರ ಬಯಲಿಗೆ ಬರುತ್ತಿವೆ. ವಾಲ್ಮೀಕಿ ನಿಗಮದ ೧೮೭ ಕೋಟಿ ರೂ. ಹಣವನ್ನು ಅಕ್ರಮ ವರ್ಗಾವಣೆ, ಮುಡಾ ನಿವೇಶನ ಹಂಚಿಕೆ ಅಕ್ರಮ ಬಯಲಿಗೆ ಬಂದಿದೆ.

ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರು ಅಽಕಾರವನ್ನು ದುರುಪಯೋಗ ಪಡೆಸಿಕೊಂಡು ಅಕ್ರಮ ಎಸಗಿದ್ದಾರೆ. ರಾಜ್ಯದ ಜನತೆಗೆ ಸತ್ಯವನ್ನು ಮರೆಮಾಚಿ ಸುಳ್ಳು ಮಾಹಿತಿ ನೀಡಿದ್ದಾರೆ. ಈ ಕೂಡಲೇ ಸಿಎಂ ಸಿದ್ದರಾಮಯ್ಯನವರು ಭ್ರಷ್ಟಚಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸಿದರು.

ಬೆಂಗಳೂರಿAದ ಆರಂಭಗೊAಡಿರುವ ಪಾದಯಾತ್ರೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಸಹ ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ಸುಕರಾಗಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕುಗಳಿಂದ ತಲಾ ೫೦ ಕಾರ್ಯಕರ್ತರು ಆ. ೯ ಹಾಗೂ ೧೦ರಂದು ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಅಗತ್ಯ ವಾಹನ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪ್ರಮುಖರಾದ ರಾಮನಗೌಡ ಪಾಟೀಲ, ಎಂ.ಎಸ್. ಹಣಗಿ, ಸುನೀಲ ದಂಡೆಮ್ಮನವರ, ಸಲೀಂ ಸಮ್ಮನಳ್ಳಿ, ಅಲ್ತಾಫ್ ನದಾಫ್, ಉಮೇಜಾನ್ ಬೇಪಾರಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net