ಪ್ರಧಾನಿ ಮೋದಿ ಓಡಾಡೋದು ಐಷಾರಾಮಿ ವಿಮಾನದಲ್ಲಿ ಅಲ್ವಾ: ಸಿಎಂ ಸಿದ್ದರಾಮಯ್ಯ

siddaramaiah
Published on

ಬೆಂಗಳೂರು: ಐಷಾರಾಮಿ ಚಾರ್ಟರ್ಡ್ ಫ್ಲೈಟ್‌ನಲ್ಲಿ ಉದ್ದನೆಯ ಸೋಫಾ ಇರುವ ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್ ,ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್‌ ಕೂಡ ಇರುವುದು 32 ಸೆಕೆಂಡುಗಳ ವಿಡಿಯೋ ವೈರಲ್​ ಆಗಿತ್ತು. ಈ ಕುರಿತಾಗಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ಜಮೀರ್ ಅಹ್ಮದ್ ಖಾನ್ ಗುರುವಾರ ರಾತ್ರಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ವಿಮಾನ ಪ್ರಯಾಣದ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ಈ ಕುರಿತಾಗಿ ವಿರೋಧ ಪಕ್ಷದ ನಾಯಕರು ಹಾಗೂ ಜನಸಾಮಾನ್ಯರು ವಿರೋಧ ವ್ಯಕ್ತಪಡಿಸಿದ್ದರು.

ಕರ್ನಾಟಕ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಜತೆ ಐಷಾರಾಮಿ ವಿಮಾನದಲ್ಲಿ  ಪ್ರಯಾಣಿಸಿದ್ದನ್ನು ಟೀಕಿಸಿದ ಬಿಜೆಪಿಗೆ  ಸಿದ್ದರಾಮಯ್ಯ ತಿರುಗೇಟು ನೀಡಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಯಾವ ವಿಮಾನದಲ್ಲಿ ಓಡಾಡುತ್ತಾರೆ? ಅವರದ್ದು ಐಷಾರಾಮಿ ವಿಮಾನ ಅಲ್ಲವೇ ಎಂದು ಪ್ರಶ್ನೆ ಮಾಡಿದರು.ದೇಶದಲ್ಲಿ ಯಾವುದೇ ಸ್ಥಿತಿ ಇದ್ದರೂ ಮೋದಿ ಓಡಾಡುವ ಫ್ಲೈಟ್ ಎಂಥದ್ದು? ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net