ಮಾಜಿ ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಮಾಜಿ ಸಚಿವ ಎ. ಮಂಜು: ಕಾಂಗ್ರೆಸ್​ ಸೇರುವ ಮುನ್ಸೂಚನೆಯೆ?

a. manju
Published on

ಹಾಸನ: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎ. ಮಂಜು ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜು ಅವರು ವೇದಿಕೆಯಲ್ಲಿ ಬಹಿರಂಗವಾಗಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.

ನಮ್ಮ ನಾಯಕ ಸಿದ್ದರಾಮಯ್ಯ. ನಾನು ಸಚಿವನಾಗಿದ್ದ ವೇಳೆ ನನ್ನ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.

ಹಿಂದೆ ನಮಗೆ ಉಪಕಾರ ಮಾಡಿದವರನ್ನು ನೆನೆಸಿಕೊಳ್ಳಬೇಕು. ಹೀಗಾಗಿ ಸಿದ್ದರಾಮಯ್ಯ ಅವರನ್ನು ನಾನು ಸ್ಮರಿಸಿಕೊಳ್ಳುತ್ತೇನೆ ಎಂದರು.

ಬಿಜೆಪಿ ಮುಖಂಡ ಎ. ಮಂಜು ಅವರ ಈ ನಡೆ ಅವರು ಮತ್ತೆ ಕಾಂಗ್ರೆಸ್​ಗೆ ಸೇರುತ್ತಾರೆ ಎನ್ನುವ ಚರ್ಚೆಗೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net