ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸರ ವಶಕ್ಕೆ!

d (1)
Published on

ಚಿತ್ರದುರ್ಗ: ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಡಿಯೋ ಇದೆ ಹೇಳಿದ್ದ ವಕೀಲ ದೇವೇರಾಜೇಗೌಡರನ್ನು ಹಿರಿಯೂರು ಬಳಿ ರಾತ್ರಿ ಎಂಟು ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಸ್ಐಟಿ ಅಧಿಕಾರಿಗಳ‌ ಮಾಹಿತಿ ಮೇರೆಗೆ ಚಿತ್ರದುರ್ಗ ಕಡೆಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೇವರಾಜೇಗೌಡ ಅವರನ್ನು ಹಿರಿಯೂರು ತಾಲ್ಲೂಕು ಐಮಂಗಲ ಠಾಣೆ ವ್ಯಾಪ್ರಿ ಗುಯಿಲಾಳು ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ದೇವರಾಜೇಗೌಡ ಅವರನ್ನು ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು.

ಹಿರಿಯೂರು ರೂರಲ್ ಸಿಪಿಐ ಕಾಳಿಕೃಷ್ಟ ಹಾಗೂ ಸಿಬ್ಬಂದಿ‌ ಕಾರ್ಯಚರಣೆಯಲ್ಲಿ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿರುವ ಹಿರಿಯೂರು ಪೊಲೀಸರು ಎಸ್​ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಲು ಬೆಂಗಳೂರಿಗೆ ಕರೆದೊಯ್ದಿರುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net