

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕರೊನಾ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಏರುತ್ತಿದೆ. ಸೋಂಕಿತರ ಪ್ರಮಾಣವೂ ಹೆಚ್ಚುತ್ತಿದೆ.
ಕೊವಿಡ್-19ನಿಂದ ಬಿಜೆಪಿ ನಾಯಕ ಸಂಜಯ್ ಶರ್ಮಾ ಅವರು ಇಂದು ಮೃತಪಟ್ಟಿದ್ದಾರೆ. ಬಿಜೆಪಿ ದೆಹಲಿ ಘಟಕದ ಮುಖಂಡರಾಗಿರುವ ಇವರು, ಹಿಂದೆ ಪಾರ್ಟಿ ಕಮಿಟಿಯ ಅಧ್ಯಕ್ಷರಾಗಿದ್ದರು. ಲಾಕ್ಡೌನ್ ಸಂದರ್ಭದಲ್ಲಿ ಬಡವರಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಿದ್ದಾರೆ. ನೆರವು ನೀಡಿದ್ದರು. ಕರೊನಾದಿಂದ ಆಸ್ಪತ್ರೆ ಸೇರಿದ್ದ ಶರ್ಮಾಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಿರು ಮೇಲಿನ ಮೇಘನಾ ಪ್ರೀತಿ ಎಂಥದ್ದು ಎಂಬುದಕ್ಕೆ ಆ ಒಂದು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿದೆ ಉತ್ತರ
ಬಿಜೆಪಿಯ ದೆಹಲಿ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಶ್ ಭಾಟಿಯಾ ಈ ವಿಚಾರವನ್ನು ತಿಳಿಸಿ, ಸಂಜಯ್ ಶರ್ಮಾ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಆತ್ಮ ಶಾಂತಿಯಲ್ಲಿ ನೆಲೆಸಲಿ, ದುಃಖ ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ನೀಡಲಿ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಇದುವರೆಗೆ 31,000 ಕೊವಿಡ್ ಪ್ರಕರಣಗಳು ದಾಖಲಾಗಿವೆ. 900ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಅಳಿಯನ ಸಾವಿನ ಬೆನ್ನಲ್ಲೇ ಫೇಸ್ಬುಕ್ ಕವರ್, ಪ್ರೊಫೈಲ್ಗೆ ಕಪ್ಪು ಫೋಟೋ ಅಪ್ಲೋಡ್ ಮಾಡಿದ ಅರ್ಜುನ್ ಸರ್ಜಾ