ರಾತ್ರೋರಾತ್ರಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ಬಂಧನ

manikantha rathod
Published on

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ರನ್ನು ಹೈದ್ರಾಬಾದ್​ನಲ್ಲಿ ಕಲಬುರಗಿಯ ಬ್ರಹ್ಮಪುರ ಪೊಲೀಸರು ಬಂಧಿಸಿದ್ದು, ನಿನ್ನೆ(ಭಾನುವಾರ) ತಡ ರಾತ್ರಿಯೇ ಕಲಬುರಗಿಗೆ ಕರೆತಂದಿದ್ದಾರೆ.

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ಮಣಿಕಂಠ ರಾಠೋಡ್​ ಹೇಳಿಕೆ ನೀಡಿದ್ದರು. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಬಿಜೆಪಿ ಮುಖಂಡನ ಬಂಧನಕ್ಕೆ‌ ಆಗ್ರಹಿಸಿ ಕಲಬುರಗಿ ಎಸ್​ಪಿ ಕಚೇರಿ ಮುಂಭಾಗ ಕಾಂಗ್ರೆಸ್​ ಬೃಹತ್ ಪ್ರತಿಭಟನೆ ಕೂಡ ನಡೆಸಿತ್ತು. ಇಂದು(ಸೋಮವಾರ) ಕಲಬುರಗಿಗೆ ಆಗಮಿಸುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡುವುದಾಗಿ ಕಾಂಗ್ರೆಸ್ ಎಚ್ಚರಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿ ಮಣಿಕಂಠ ರಾಠೋಡ್​ರನ್ನು ಬಂಧಿಸಿ ಕಲಬುರಗಿಗೆ ಕರೆತಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net