

ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಹಿಂದೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಕೈವಾಡವಿದೆ ಎಂದು ಆಗ್ರಹಿಸಿ, ಸಚಿವರ ಮನೆಗೆ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಕೈಗೊಂಡ ವಿಪಕ್ಷ ನಾಯಕ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಸಿ.ಟಿ. ರವಿ. ಎನ್. ರವಿಕುಮಾರ್ ಸೇರಿದಂತೆ ಪ್ರಮುಖ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಹತ್ತಿರ ಆಗಮಿಸಿ, ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಆರ್ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ ರವಿ, ಎನ್. ರವಿಕುಮಾರ್ ಸೇರಿದಂತೆ ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾರಿಗೆ ಸಂಸ್ಥೆಯ ಎರಡು ಬಸ್ಗಳಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ಕರೆದೊಯ್ದಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿವಾಸದತ್ತ ಪ್ರತಿಭಟನಾ ನಿರತ ಬಿಜೆಪಿಗರ ದಂಡು ಮುತ್ತಿಗೆ ಹಾಕಲು ಯತ್ನಿಸುತ್ತಿದ್ದಂತೆ ಪೊಲೀಸರು ಮುಖಂಡರನ್ನು ತಡೆಯಲು ಮುಂದಾದರು. ಈ ವೇಳೆ ಖಾಕಿ ಪಡೆ ಮತ್ತು ಬಿಜೆಪಿ ನಾಯಕರ ಮಧ್ಯೆ ನೂಕಾಟ ತಳ್ಳಾಟ ಉಂಟಾಗಿದೆ.