ಮುಸ್ಲಿಂ ಯುವಕನನ್ನು ಮದುವೆಯಾಗಲಿದ್ದಾಳೆ ಬಿಜೆಪಿ ಮುಖಂಡನ ಮಗಳು!

wedding
Published on

ಉತ್ತರಾಖಂಡ: ಬಿಜೆಪಿ ನಾಯಕರೊಬ್ಬರ ಮಗಳು ಮುಸ್ಲಿಂ ಯುವಕನನ್ನು ಮದುವೆಯಾಗುತ್ತಿದ್ದಾಳೆ. ಲಗ್ನ ಪತ್ರಿಕೆ ಫೋಟೋ ವೈರಲ್ ಆದ ನಂತರ ನೆಟ್ಟಿಗರು ಟೀಕೆ ಮಾಡಿದ್ದಾರೆ.

ಉತ್ತರಾಖಂಡದ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾಳೆ. ಮೇ 28ರಂದು ಬೇನಾಮಿ ಪುತ್ರಿಯ ವಿವಾಹ ನಡೆಯಲಿದೆ. ಈ ಮದುವೆ ಕಾರ್ಯಕ್ರಮಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರನ್ನು ಆಹ್ವಾನಿಸಲಾಗಿದೆ.

ಹಿಂದುತ್ವವಾದಿಗಳು ಮಾಜಿ ಶಾಸಕ ಬೇನಾಮ್‌ ಅವರ ಇಬ್ಬಗೆ ನೀತಿಯ ಕುರಿತು ಟ್ರೋಲ್‌ ಆಗುತ್ತಿದ್ದಾರೆ. ಬೇರೆಯವರು ಮುಸ್ಲಿಂ ಯುವಕನನ್ನು ವಿವಾಹವಾದರೆ ಲವ್‌ ಜಿಹಾದ್‌ ಎಂದು ಆರೋಪಿಸುತ್ತಿರುವ ಬಗ್ಗೆ ಜಾಲತಾಣದಲ್ಲಿ ಟೀಕೆಯನ್ನು ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರ ಮಗಳು ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುತ್ತಿದ್ದಾರೆ. ಇದು ಬಿಜೆಪಿಯ ದ್ವಂದ್ವ ನೀತಿಯಾಗಿದ್ದು, ಪಕ್ಷದ ಕಾರ್ಯಕರ್ತರು ಹತಾಶರಾಗುತ್ತಾರೆ ಎಂದೆಲ್ಲಾ ಕಾಮೆಂಟ್​​ಗಳು ಬರುತ್ತಿವೆ.

ಮುಸ್ಲಿಂ ಯುವಕರು ಹಿಂದೂ ಯುವತಿಯನ್ನು ವಿವಾಹವಾಗುವ ಮೂಲಕ ಮತಾಂತರಗೊಳಿಸುತ್ತಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಬಲ ಪಂಥೀಯ ಸಂಘಟನೆಯ ಕಾರ್ಯಕರ್ತರು ಇದೊಂದು ಲವ್‌ ಜಿಹಾದ್‌ ಎಂದು ಕರೆದಿದ್ದರು.

ಭಾರತದಲ್ಲಿ ಮತಾಂತರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಬಿಜೆಪಿಯ ಮುಖಂಡರು ತಮ್ಮ ಮಗಳನ್ನು ಮುಸ್ಲಿಂ ಯುವಕನಿಗೆ ಧಾರೆ ಎರೆಯುತ್ತಿದ್ದಾರೆ. ಮತ್ತೊಂದು ಧರ್ಮದ ವ್ಯಕ್ತಿಯನ್ನು ಮದುವೆ ಆಗುತ್ತಿರುವುದು ಕಳವಳಕಾರಿಯಾಗಿದೆ. ಮತಾಂತರ ನಿಷೇಧ ಕಾಯ್ದೆಯನ್ನು ಬದಲಿಸಬೇಕಾಗಿದೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ , ಬಜರಂಗ ದಳ ವಿರೋಧಿಸಬೇಕಾಗಿದೆ ಎಂದು ಪೌರಿ ದೇವಾಲಯ ಆಡಳಿತ ಮಂಡಳಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net