

ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಸಾದರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜನ್ಮೇಜಯ್ ಸಿಂಗ್ ಅವರು ಇಂದು ನಿಧನರಾದರು.
ಹೃದಯಾಘಾತಕ್ಕೀಡಾದ ಶಾಸಕ(75)ರನ್ನು ಲಖನೌದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೋಹಿಯಾ ಆಸ್ಪತ್ರೆಯಲ್ಲಿ ಅವರಿಗೆ ಗುರುವಾರ ರಾತ್ರಿ ಪೇಸ್ಮೇಕರ್ ಅಳವಡಿಸಲಾಗುತ್ತಿತ್ತು. ಆದರೆ ಇದೇ ಸಂದರ್ಭದಲ್ಲಿ ಸಿಂಗ್ ಮೃತಪಟ್ಟಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ವಿಧಾನಸಭಾ ಸ್ಪೀಕರ್ ಹೃದಯ್ ನಾರಾಯಣ್ ದೀಕ್ಷಿತ್ ಅವರು ಜನಮೇಜಯ್ ಸಿಂಗ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.(ಏಜೆನ್ಸೀಸ್)