ನಾಳೆ-ನಾಡಿದ್ದು ಬಿಜೆಪಿ ಮಹಾಪ್ರಚಾರ ಅಭಿಯಾನ; 224 ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಸುದ್ದಿಗೋಷ್ಠಿ

Mahaprachara Abhiyana
Published on

ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿರುವ ಬಿಜೆಪಿ ಇದೀಗ ಎರಡು ದಿನಗಳ ಮಹಾಪ್ರಚಾರ ಅಭಿಯಾನಕ್ಕೆ ಮುಂದಾಗಿದೆ. ನಾಳೆ-ನಾಡಿದ್ದು ಈ ಮಹಾಪ್ರಚಾರ ಅಭಿಯಾನ ನಡೆಯಲಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಳೆ ಏಕಕಾಲದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಏಕಕಾಲಕ್ಕೆ 224 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಅಭಿಯಾನ ನಡೆಯಲಿದೆ. ಅಲ್ಲದೆ ಹೋಬಳಿ ಮತ್ತು ತಾಲೂಕು ಕೇಂದ್ರಗಳಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳು ನಡೆಯಲಿವೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ, ಕೇಂದ್ರ ಗೃಹಸಚಿವ ಅಮಿತ್ ಶಾ, ಯೋಗಿ ಆದಿತ್ಯನಾಥ್, ರಾಜ್​ನಾಥ್ ಸಿಂಗ್, ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮನಸುಖ್​ ಮಾಂಡವೀಯ ಸೇರಿದಂತೆ 98 ರಾಷ್ಟ್ರೀಯ ನಾಯಕರು, 150 ರಾಜ್ಯಮಟ್ಟದ ನಾಯಕರು ಈ ಮಹಾಪ್ರಚಾರ ಅಭಿಯಾನದಲ್ಲಿ ಪಾಲ್ಗೊಳ್ಳಲಿರುವರು. ಜೊತೆಗೆ ಮನೆಮನೆ ಸಂಪರ್ಕ ಕಾರ್ಯಕ್ರಮವೂ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net