ಉತ್ತರ ಪ್ರದೇಶದಲ್ಲಿ ಬಿಜೆಪಿ ಮುಖಂಡನ ಹತ್ಯೆ

BJP Leader
Published on

ಫಿರೋಜಾಬಾದ್​: ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಫಿರೋಜಾಬಾದ್​ ಮಂಡಲ್​ನ ಬಿಜೆಪಿ ಉಪಾಧ್ಯಕ್ಷ ಡಿ.ಕೆ.ಗುಪ್ತಾ ಹತ್ಯೆಯಾದವರು. ಬೈಕ್​​​​​ನಲ್ಲಿ ಬಂದ ಮೂವರು ಅಪರಿಚಿತರು ಶೂಟ್ ಮಾಡಿದ್ದಾರೆ ಎಂದು ವರದಿಯಾಗಿದೆ. ಇಂದು ಸಂಜೆ 8ಗಂಟೆ ಹೊತ್ತಿಗೆ ಘಟನೆ ನಡೆದಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಡಿ.ಕೆ.ಗುಪ್ತಾ ಅವರು ತಮ್ಮ ಕಿರಾಣಿ ಅಂಗಡಿಯಲ್ಲಿ ಇದ್ದರು. ಅಲ್ಲಿಗೇ ಬಂದ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ತೀವ್ರವಾಗಿ ಗಾಯಗೊಂಡ ಗುಪ್ತಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net