

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರವನ್ನು ಕಟ್ಟಿರುವಾಗ ಜೈ ಶ್ರೀರಾಮ್ ಹೇಳುವುದರಲ್ಲಿ ಏನು ತೊಂದರೆ ಸಾವಿರ ಸಲ ಹೇಳಲಿಬಿಡಿ ಎಂದಿದ್ದ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಅವರನ್ನು ಬಿಜೆಪಿ ಪಶ್ಚಿಮ ಬಂಗಾಳದಿಂದ ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.
ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ಗೆ ಆಘಾತ ನೀಡಲು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಯೋಜನೆ ಹಾಕಿದೆ. ಈ ಮೂಲಕ ಆಡಳಿತ ಪಕ್ಷಕ್ಕೆ ಸೆಡ್ಡು ಹೊಡಿಯಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡಿದೆ ರಾಜಕೀಯ ಕ್ಷೇತ್ರಕ್ಕೆ ಬರಬೇಕು ಎಂದು ಶಮಿ ಅವರನ್ನು ಕೇಂದ್ರದ ಪ್ರಮುಖ ಬಿಜೆಪಿ ಮುಖಂಡರು ಸಂಪರ್ಕಿಸಿದ್ದಾರೆ. ಈ ಬಗ್ಗೆ ಪಾಸಿಟೀವ್ ಚರ್ಚೆ ಆಗಿದೆಯಂತೆ. ಆದರೆ ಶಮಿ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ.
ಆಡಳಿತ ಪಕ್ಷದ ಪ್ರಮುಖ ಎದುರಾಳಿ ಬಿಜೆಪಿ ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಗಟ್ಟಿ ನೆಲೆಯೂರಲ್ಲಿ ಯೋಜನೆ ರೂಪಿಸಿದೆ. ಪ್ರಸಿದ್ಧ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಸಿಕೊಳ್ಳುತ್ತಿದೆ. ಇತ್ತೀಚೆಗೆ ನ್ಯಾಯಮೂರ್ತಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದರು.
ಮೊಹಮ್ಮದ್ ಶಮಿ ಕಮಲ ಪಕ್ಷಕ್ಕೆ ಬಂದರೆ ಅವರನ್ನು ಬಂಗಾಳದ ಅಲ್ಪಸಂಖ್ಯಾತ ಪ್ರಾಬಲ್ಯದ ಕ್ಷೇತ್ರವನ್ನು ಆಯ್ದು, ಕಣಕ್ಕಿಳಿಸುವುದು ಅದರ ಯೋಜನೆಯಾಗಿದೆ.
ಶಮಿ ಅವರನ್ನು ಬಸಿರ್ಹಾತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವುದು ಖಚಿತ ಎನ್ನಲಾಗಿದ್ದು ಶಮಿ ಬಿಜೆಪಿ ಸೇರಿದರೆ, ಇಲ್ಲಿನ ಟಿಎಂಸಿ ವಿರೋಧಿ ಅಲೆಯ ಜತೆಗೆ ಅಲ್ಪಸಂಖ್ಯಾತರ ಮತಗಳನ್ನೂ ಪಡೆಯಲು ಸಾಧ್ಯವಾಗಲಿದೆ ಎನ್ನುವುದು ಬಿಜೆಪಿ ಲೆಕ್ಕಾಚಾರ ಹಾಕಿಕೊಂಡಿದೆ.
ವಿಶ್ವಕಪ್ ಟೂರ್ನಿ ವೇಳೆ ವೇಳೆ ಗಾಯಗೊಂಡಿದ್ದ ಶಮಿ ಅವರು ಇನ್ನೂ ಚೇತರಿಸಿಕೊಂಡಿಲ್ಲ. ಅವರು ಬ್ರಿಟನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಐಪಿಎಲ್ ಟಿ 20 ಟೂರ್ನಿಯಲ್ಲಿ ಕೂಡ ಅವರು ಕಣಕ್ಕಿಳಿಯುವುದಿಲ್ಲ ಎಂದು ಹೇಳಲಾಗಿದೆ. ಇದರ ನಡುವೆ ಅವರನ್ನು ಚುನಾವಣಾ ಕಣಕ್ಕೆ ಇಳಿಸುವ ಬಗ್ಗೆ ವದಂತಿ ಹರಿದಾಡುತ್ತಿದೆ.