VIDEO | ಫೋಟೋ ನೆಪದಲ್ಲಿ ಬಾಲಕಿಯರ ಜತೆ ಅನುಚಿತವಾಗಿ ವರ್ತಿಸಿದ ಬಿಜೆಪಿ ಶಾಸಕ!

Gauri Shankar Bisen BJP MLA
Published on

ಮಧ್ಯಪ್ರದೇಶ: ಬಿಜೆಪಿ ಶಾಸಕ, ಮಾಜಿ ಸಚಿವ ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಗೌರಿ ಶಂಕರ್ ಬಿಸೆನ್ ಅವರು ಕಾರ್ಯಕ್ರಮವೊಂದರಲ್ಲಿ ಬಾಲಕಿಯರನ್ನು ಅನುಚಿತವಾಗಿ ಸ್ಪರ್ಶಿಸುತ್ತಿರುವ ವಿಡಿಯೋಗೆ ಸೋಶಿಯಲ್​​​ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಫೋಟೋ ತೆಗೆಸುವ ನೆಪದಲ್ಲಿ ಬಿಜೆಪಿ ಶಾಸಕ ಗೌರಿ ಶಂಕರ್ ಬಿಸೆನ್, ಬಾಲಕಿಯರ ಎದೆಭಾಗವನ್ನು ಅನುಚಿತವಾಗಿ ಸ್ಪರ್ಷಿಸಿದ್ದಾರೆ. ಬಿಜೆಪಿ ಶಾಸಕನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನು ಎಂಪಿ ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಈ ಕ್ಲಿಪ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿದ್ದು, “ಬಿಜೆಪಿ ಶಾಸಕ, ಮಾಜಿ ಸಚಿವ ಮತ್ತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಗೌರಿ ಶಂಕರ್ ಬಿಸೆನ್ ಅವರು ಹೆಣ್ಣುಮಕ್ಕಳೊಂದಿಗೆ ನಾಚಿಕೆಗೇಡಿನ ಕೃತ್ಯವನ್ನು ಮಾಡುತ್ತಿದ್ದಾರೆ. ಬಿಜೆಪಿ ನಾಯಕರಿಂದ ಮಗಳನ್ನು ಉಳಿಸಿ" ಎಂದಿದ್ದಾರೆ.

ಈ ಪೋಸ್ಟ್ ಕುರಿತು ಪ್ರತಿಕ್ರಿಯಿಸಿದ ಮುಂಬೈ ಕಾಂಗ್ರೆಸ್ ಸೇವಾದಳದ ರಾಜ್ಯ ಸಂಯೋಜಕ ಮುಖೇಶ್ ಗುಪ್ತಾ, “ಈ ಹುಡುಗಿಯರಿಗೆ ಮಹಿಳಾ ವೈದ್ಯರಿಂದ ಸಲಹೆ ನೀಡಬೇಕು. ಹೆಣ್ಣುಮಕ್ಕಳೊಂದಿಗೆ ಇಂತಹ ಕೃತ್ಯ ನಾಚಿಕೆಗೇಡಿನ ಸಂಗತಿ, ಬಿಜೆಪಿ ನಾಯಕರಿಗೆ ನಾಚಿಕೆಗೇಡು, ಶಿವರಾಜ್ ಸಿಂಗ್ ಚೌಹಾಣ್, ಸ್ವಲ್ಪ ನಾಚಿಕೆಯಾಗಲಿ, ನಿಮ್ಮ ಪಕ್ಷದ ನಾಯಕರು ಏನು ಮಾಡುತ್ತಿದ್ದಾರೆಂದು ನೋಡಿ? ಎಂದಿದ್ದಾರೆ.

ಮಾಜಿ ಸಚಿವರ ಅನುಚಿತ ವರ್ತನೆಯ ಕಾಂಗ್ರೆಸ್ ಆರೋಪವನ್ನು ಬಲವಾಗಿ ತಳ್ಳಿಹಾಕಿದ ಬಿಜೆಪಿ, ಅಪ್ರಾಪ್ತ ಬಾಲಕಿಯರನ್ನು ಒಳಗೊಂಡ ವಿಡಿಯೋವನ್ನು ಟ್ವೀಟ್ ಮಾಡಿದ್ದಕ್ಕಾಗಿ ವಿರೋಧ ಪಕ್ಷವನ್ನು ಟೀಕಿಸಿದೆ ಮತ್ತು ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net