

ಕಲಬುರ್ಗಿ: ಕಲಬುರ್ಗಿಯ ಬಿಜೆಪಿ ಶಾಸಕ ಬಸವರಾಜ ಮಟ್ಟಿಮುಡ ಅವರು ಪ್ರಯಾಣಿಸುತ್ತಿದ್ದ ಫಾರ್ಚುನರ್ ಕಾರು ಪಲ್ಟಿಯಾಗಿದ್ದು, ಭಾರೀ ಅನಾಹುತದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಬಸವರಾಜ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ಚಿಕಿತ್ಸೆ ಕೊಡಿಸಲಾಗಿದೆ.
ಕಾರಿನೊಳಗೆ ಐದು ಜನರು ಪ್ರಯಾಣಿಸುತ್ತಿದ್ದು, ಐವರಲ್ಲಿ ಶಾಸಕ ಬಸವರಾಜ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಪಫಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಶಾಸಕ ಮತ್ತಿಮೂಡ ಶಹಾಬಾದ್ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಿರಿದಾದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ದ್ವಿಚಕ್ರ ವಾಹನ ಬಂದಾಗ, ಚಾಲಕ ಕಾರನ್ನು ಎಡಭಾಗಕ್ಕೆ ತಿರುಗಿಸಿದ್ದರಿಂದ ವಾಹನ ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ.