

ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಲ್.ನಾಗೇಂದ್ರ ಭಾನುವಾರ ಚಾಲನೆ ನೀಡಿದರು.
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ವಿಶೇಷ ಅನುದಾನದ 1 ಕೋಟಿ ರೂ. ವೆಚ್ಚದಲ್ಲಿ ವಾರ್ಡ್ ನಂ.26ರ ವ್ಯಾಪ್ತಿಯ ಸಾಡೇ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.
ನಗರ ಪಾಲಿಕೆ ಮಾಜಿ ಸದಸ್ಯ ಬಾಬು, ಬಿಜೆಪಿ ವಾರ್ಡ್ ಅಧ್ಯಕ್ಷ ಶ್ರೀಕಾಂತ್, ಮುಖಂಡರಾದ ತನ್ವೀರ್, ತಬ್ರೇಜ್, ಧರ್ಮರಾಜು, ಸುರೇಂದ್ರ ಬಾಬು, ಹಬೀದ್, ಅಕ್ರಂ, ಸಲೀಂ ಇತರರಿದ್ದರು.