ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು; ಅಭಿವೃದ್ಧಿಯೇ ಆಗಿಲ್ಲ ಎಂದು ಕ್ಲಾಸ್!

mla vs villagers
Published on

ವಿಜಯಪುರ: ವಿಜಯಪುರದ ಹಳ್ಳಿಯೊಂದಕ್ಕೆ ಭೇಟಿ ನೀಡಿದ್ದ ಬಿಜೆಪಿ ಶಾಸಕರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಎಲ್ಲಿ? ಏನು?

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಆರೆಶಂಕರ ಗ್ರಾಮದಲ್ಲಿ ಘಟನೆ ನಡೆದಿದ್ದು ದೇವರ ಹಿಪ್ಪರಗಿಯ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರಗೆ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಉಂಟಾಗಿದೆ.

"ಅಭಿವೃದ್ಧಿಗೆ ಬಂದ ಹಣ ಏನು ಮಾಡಿದ್ರಿ ಶಾಸಕರೆ?" ಎಂದ ಗ್ರಾಮಸ್ಥರು

ದೇವರ ಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆರೆಶಂಕರ ಗ್ರಾಮದ ಅಭಿವೃದ್ಧಿ ವಿಚಾರವಾಗಿ ಸಿಟ್ಟಾಗಿದ್ದ ಕೆಲ ಗ್ರಾಮಸ್ಥರು ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಶಾಸಕರನ್ನು ಊರಲ್ಲಿ ಸಿಸಿ ರಸ್ತೆಗಳಾಗಿಲ್ಲ, ಚರಂಡಿ ವ್ಯವಸ್ಥೆ ಸರಿ ಇಲ್ಲ, ಅಭಿವೃದ್ಧಿಗೆ ಬಂದಿದ್ದ ಹಣ ಏನ್ ಮಾಡಿದ್ದೀರಿ ಎಂದು ಪ್ರಶ್ನಿಸುತ್ತಾ ತರಾಟೆಗೆ ತೆಗೆದುಕೊಂಡಿದ್ದಾರೆ. ಆ ಸಂದರ್ಭ ಶಾಸಕರ ಬೆಂಬಲಿಗರ ಜತೆ ಕೆಲ ಗ್ರಾಮಸ್ಥರು ವಾಗ್ವಾದ ನಡೆಸಿದ್ದಾರೆ.

ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗಿಲ್ಲ ಎಂದು ಶಾಸಕ ಸೋಮನಗೌಡಗೆ ಜನ ಕ್ಲಾಸ್ ತೆಗೆದುಕೊಂಡಿದ್ದಾರೆ. ಈ ಸಂದರ್ಭ ತಡೆಯಲು ಬಂದ ಶಾಸಕರ ಬೆಂಬಲಿಗರಿಗೂ ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net