40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕರ ಪುತ್ರ

Arrest
Published on

ಬೆಂಗಳೂರು: ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿ ಲಂಚ ಪಡೆಯುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ರೆಡ್​ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಟ್ರಾಪ್ ಕಾರ್ಯಾಚರಣೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ.

ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್​ಗಾಗಿ KSDL ಅಧ್ಯಕ್ಷರ ಪರವಾಗಿ ಹಣ ಸ್ವೀಕರಿಸುವಾಗ ಪ್ರಶಾಂತ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ವರದಿಯ ಪ್ರಕಾರ 81 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 40 ಲಕ್ಷ ರೂಪಾಯಿ ಪಡೆದುಕೊಳ್ಳುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಚೀಫ್ ಅಕೌಂಟೆಂಟ್ ಆಗಿರುವ ಪ್ರಶಾಂತ್ ಅವರನ್ನು ಸದ್ಯ ಲೋಕಾಯಕ್ತ ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಹತ್ತಕ್ಕೂ ಅಧಿಕ ಲೋಕಾಯುಕ್ತ ಪೊಲೀಸರು, ಕ್ರೆಸೆಂಟ್ ರಸ್ತೆಯಲ್ಲಿರುವ ಶಾಸಕರ ಕಚೇರಿಗೆ ದಾಳಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net