ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ: CM ಸಿದ್ದರಾಮಯ್ಯ

Bbau - 2025-10-31T173108.030
Published on

ಬೆಂಗಳೂರು: ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ ಎಂದು CM ಸಿಎಂ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಹಾಗೂ ದಿವಂಗತ ಸರ್ದಾರ ವಲ್ಲಭಬಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿಯವರು ನೆಹರೂ ಅವರನ್ನು ಟೀಕಿಸುತ್ತಾರೆ. ಆದರೆ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಮಹಾತ್ಮಾ ಗಾಂಧಿಯವರ ನೇತೃತ್ವದಲ್ಲಿ ನೆಹರೂ, ವಲ್ಲಭಭಾಯಿ ಪಟೇಲ್ ಸುಭಾಷ್ ಚಂದ್ರ ಬೋಸ್ ಸೇರಿದಂತೆ ಅನೇಕರು ಹೋರಾಡಿದರು. ಇಂದು ದೇಶ ಸ್ವತಂತ್ರವಾಗಿದ್ದರೆ ಅದು ಅವರ ಹೋರಾಟದ ಫಲ. ಬಿಜೆಪಿಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿಯೇ ಇಲ್ಲ. ಸಾವರ್ಕರ್, ಗೋಲ್ವಾಲ್ಕರ್ ಆಗಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ. ಈಗ ಬಿಜೆಪಿಯವರು ಮಹಾನ್ ದೇಶಭಕ್ತರಂತೆ ಮಾತನಾಡುತ್ತಾರೆ. ಇದನ್ನು ಬಿಜೆಪಿಯವರ ಢೋಂಗಿತನ ಎಂದರು.

ಹೆಡ್ಗೆವಾರ್ RSS ಕಾರ್ಯಕರ್ತರಿಗೆ ಕರೆ ನೀಡಲಿಲ್ಲ

ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದು ಕಾಂಗ್ರೆಸ್ ಹೊರತು ಬೇರ್ಯಾರೂ ಅಲ್ಲ. 1925 ರಲ್ಲಿಯೇ ಆರ್.ಎಸ್.ಎಸ್ ಸ್ಥಾಪನೆಯಾಗಿತ್ತು. ಆಗ ಸ್ವಾತಂತ್ರ್ಯ ಹೋರಾಟ ಬಹಳ ಬಿರುಸಾಗಿ ನಡೆಯುತ್ತಿದ್ದ ಕಾಲ. ಕೆ.ಬಿ. ಹೆಡ್ಗೆವಾರ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಎಂದು RSS ಕಾರ್ಯಕರ್ತರಿಗೆ ಕರೆ ನೀಡಲಿಲ್ಲ. ಸಾವರ್ಕರ್ ಮತ್ತು ಹಿಂದು ಮಹಾ ಸಭಾದ ಅಧ್ಯಕ್ಷ ಗೋಲ್ವಾಲ್ಕರ್ ಇಬ್ಬರೂ ಸಂವಿಧಾನವನ್ನು ವಿರೋಧಿಸಿದವರು. ಮನುವಾದಿಗಳು, ಚತುರ್ವಣ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟುಕೊಂಡವರು ಯಾವತ್ತೂ ಸಂವಿಧಾನದ ಪರವಾಗಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net