ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನ; ಅಸ್ಪೃಶ್ಯತೆ ಹೋಗಲಾಡಿಸಲು ಕಂಕಣಬದ್ದರಾಗಬೇಕು: ಕಾರಜೋಳ

Bjp mandya
Published on

ಬೆಂಗಳೂರು:
ರಾಜ್ಯದ ಸಾವಿರಾರು ಹಳ್ಳಿಗಳಲ್ಲಿ ಅಸ್ಪೃಶ್ಯತೆ ಆಚರಣೆ ಇದ್ದು, ಇದನ್ನು ಹೋಗಲಾಡಿಸಲು ನಾವೆಲ್ಲರೂ ಪ್ರಯತ್ನ ಮಾಡಬೇಕು ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಧರ್ಮ ಗುರುಗಳು, ಮಠಾಧೀಶರು, ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು ಅಸ್ಪೃಶ್ಯತೆ ಹೋಗಲಾಡಿಸಲು ಸಂಘಟಿತ ಪ್ರಯತ್ನ ಮಾಡಬೇಕುಎಂದರು.
ಕೇವಲ ಆಚರಣೆಯಿಂದ ಸಮಸ್ಯೆ ಪರಿಹಾರ ಆಗುವುದಿಲ್ಲ. ಅಂಬೇಡ್ಕರ್ ಅವರು ಯಾವ ಉದ್ದೇಶಕ್ಕಾಗಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು ಎಂಬುದನ್ನು ನಾವು ಅರ್ಥ ಮಾಡಿಕೊಂಡು ಅಸ್ಪೃಶ್ಯತೆ ಆಚರಣೆ ನಿವಾರಣೆಗೆ ಶ್ರಮಿಸಬೇಕು ಎಂದರು.
ಅಸ್ಪೃಶ್ಯತೆ ಆಚರಣೆಯಿಂದ ದೇವರು, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆದು ಶೋಷಿಸುವುದರ ವಿರುದ್ಧ 12ನೇ ಶತಮಾನದಲ್ಲಿ ಬಸವಣ್ಣನವರು ಸಿಡಿದೆದ್ದರು. ನಾವೆಲ್ಲರೂ ಅವರ ಆದರ್ಶಗಳನ್ನು ಅರ್ಥ ಮಾಡಿಕೊಂಡು, ಸಮಾಜ ಸುಧಾರಣೆಯತ್ತ ಹೆಜ್ಜೆ ಹಾಕಬೇಕಿದೆ ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ. ನಾರಾಯಣಗೌಡ, ಎಸ್‌ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net