ಸದೃಢ ರಾಷ್ಟ್ರಕ್ಕಾಗಿ ಬಿಜೆಪಿಯ ಹೋರಾಟ ಎಂದಿಗೂ ನಿಲ್ಲುವುದಿಲ್ಲ: ಜೆ.ಪಿ. ನಡ್ಡಾ

JP Nadda
Published on

ಹೈದರಾಬಾದ್: ಯಾವುದೋ ಒಂದು ಕುಟುಂಬದ ಅಧೀನದಲ್ಲಿರುವ ರಾಜಕೀಯ ಪಕ್ಷಗಳ ನಡುವೆ ಬಲಿಷ್ಠ ರಾಷ್ಟ್ರಕ್ಕಾಗಿ ಬಿಜೆಪಿ ಪ್ರತಿ ರಾಜ್ಯದಲ್ಲೂ ಕೆಲಸ ಮಾಡುತ್ತಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜ್ಯ ಘಟಕದ ಕೌನ್ಸಿಲ್​ ಸಭೆಯನ್ನುದ್ದೇಶಿಸಿ ಮಾತನಾಡಿದ ನಡ್ಡಾ ರಾಜ್ಯದ ಪ್ರತಿಯೊಬ್ಬ ಮತದಾರನ ಬಳಿ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳನ್ನು ತಲುಪಿಸುವಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ತಾಕೀತು ಮಾಡಿದ್ದಾರೆ.

ದೇಶದಲ್ಲಿ ಕುಟುಂಬ ರಾಜಕಾರಣವನ್ನು ಹೊರತುಪಡಿಸಿ ಯಾವುದಾದರೂ ಒಂದು ಪಕ್ಷ ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಹೋರಾಡುತ್ತಿದ್ದರೆ ಅದು ಭಾರತೀಯ ಜನತಾ ಪಾರ್ಟಿ ಎಂದು ಹೇಳುತ್ತೇನೆ. ನನ್ನ ಮಾತುಗಳನ್ನು ಗಮನಿಸಿ ಮುಂದಿನ ದಿನಗಳಲ್ಲಿ ಪ್ರತಿ ರಾಜ್ಯದಲ್ಲೂ ಬಿಜೆಪಿಯ ಸಿದ್ದಾಂತವನ್ನು ಜನರು ಒಪ್ಪಿ ನಮಗೆ ಮತ ಹಾಕಲಿದ್ದಾರೆ. ಅದರಲ್ಲಿ ಯಾವುದೇ ಸಂಶಯ ಬೇಡ ಎಂದಿದ್ಧಾರೆ.

ಇತ್ತೀಚಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷಗಳು ಒಂದು ಕುಟುಂಬದ ಅಧೀನದಲ್ಲಿ ಸಿಲುಕಿಕೊಂಡಿವೆ. ಆದರೆ, ಬಿಜೆಪಿ ಮಾತ್ರ ರಾಷ್ಟ್ರೀಯ ಪಕ್ಷವಾಗಿ ಇದೆಲ್ಲದರ ವಿರುದ್ಧ ಹೋರಾಡುತ್ತಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತೆಲಂಗಾಣದಲ್ಲಿ ನಡೆದ ರಾಜ್ಯ ಘಟಕದ ಕೌನ್ಸಿಲ್​ ಸಭೆಯಲ್ಲಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net