ಬಿಜೆಪಿಯಲ್ಲಿ ಉದ್ಭವಿಸಿತಾ ಭಿನ್ನಮತ?: ಕುತೂಹಲ ಕೆರಳಿಸಿದೆ ವಿಪಕ್ಷ ನಾಯಕನ ಆಯ್ಕೆ ವಿಚಾರ

BJP
Published on

ಬೆಂಗಳೂರು: ಬಿಜೆಪಿ ವಿರೋಧಪಕ್ಷದ ನಾಯಕನ ಆಯ್ಕೆ ಸಲುವಾಗಿ ಬಿಜೆಪಿ ಶಾಸಕಾಂಗ ಸಭೆ ನಡೆಯುತ್ತಿದ್ದು, ಇದೀಗ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಕೆರಳಿದೆ. ಮತ್ತೊಂದೆಡೆ ಇದೇ ವಿಚಾರವಾಗಿ ಬಿಜೆಪಿಯಲ್ಲಿ ಭಿನ್ನಮತ ಉದ್ಭವಿಸಿದೆ ಎನ್ನಲಾಗಿದೆ.

ನವದೆಹಲಿಯಿಂದ ಬಂದಿರುವ ಬಿಜೆಪಿ ವೀಕ್ಷಕರು ಇಂದು ಖಾಸಗಿ ಹೋಟೆಲ್​ನಲ್ಲಿ ಶಾಸಕಾಂಗ ಸಭೆ ನಡೆಸುತ್ತಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮುಗಿಯಲಿರುವ ಸಭೆ ಬಳಿಕ ವಿಪಕ್ಷ ನಾಯಕ ಯಾರು ಎಂಬುದು ಬಹಿರಂಗವಾಗಲಿದೆ ಎನ್ನಲಾಗಿದೆ.

ಇದರ ನಡುವೆಯೇ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಸಭೆಯಿಂದ ಹೊರಗೆ ಹೋಗಿದ್ದಾರೆ. ಯಾರು ವಿಪಕ್ಷ ನಾಯಕ ಆಗಲಿದ್ದಾರೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅವರು ಅಸಮಾನಧಾನಗೊಂಡು ಸಭೆಯಿಂದ ಹೊರನಡೆದಿದ್ದಾರೆ ಎನ್ನಲಾಗಿದ್ದು, ಕ್ಷಣಕ್ಷಣಕ್ಕೂ ಒಂದೊಂದು ಬೆಳವಣಿಗೆ ನಡೆಯುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net