ಗಾಂಧಿ ಪ್ರತಿಮೆ ಎದುರು ಬಿಜೆಪಿ ಪ್ರತಿಭಟನೆ

Published on

ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿರುವ ಬಿಜೆಪಿ, ಸೆ.26ರಂದು ಬೆಳಿಗ್ಗೆ 10.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net