ಜಿಬಿಎ ಚುನಾವಣೆಗೆ ಬಿಜೆಪಿ ತಯಾರಿ

By_vijayendra
Published on

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ಐದು ಹೊಸ ಮಹಾನಗರ ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ ನಡೆಸುತ್ತಿದ್ದು, ಇದೀಗ ಪ್ರತಿಪಕ್ಷ ಬಿಜೆಪಿಯೂ ಸಹ ಕಣಕ್ಕೆ ಇಳಿದಿದೆ.

ಮುಂಬರುವ ಜಿಬಿಎ ಚುನಾವಣೆ ಸಂಬಂಧಿತ ಚಟುವಟಿಕೆಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಾಧಿಕಾರದ ಸಂಯೋಜಕರ ತಂಡ, ಸಂಘಟನಾತ್ಮಕ ಜಿಲ್ಲೆಯ ಸಂಯೋಜಕರು ಮತ್ತು ಐದು ಪಾಲಿಕೆಗಳಿಗೆ ಪ್ರಮುಖರು ಹಾಗೂ ಸಹಪ್ರಮುಖರನ್ನು ನೇಮಕ ಮಾಡಲಾಗಿದೆ. ಈಗಾಗಲೇ ಕಾಂಗ್ರೆಸ್ ಸಹ ವಿಧಾನಸಭಾ ಕ್ಷೇತ್ರವಾರು ಉಸ್ತುವಾರಿಗಳ ನೇಮಕ ಮಾಡಿ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ದಪಡಿಸುತ್ತಿದೆ.

ಈ ನಡುವೆ ಜಿಬಿಎ ಸಂಯೋಜಕರಾಗಿ ಬಿ.ವೈ. ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಡಿ.ವಿ. ಸದಾನಂದ ಗೌಡ, ಎಸ್. ಸುರೇಶ್‌ಕುಮಾರ್, ಶೋಭಾ ಕರಂದ್ಲಾಜೆ, ಪಿ.ಸಿ. ಮೋಹನ್, ಡಾ. ಸಿ.ಎನ್. ಮಂಜುನಾಥ್, ತೇಜಸ್ವಿ ಸೂರ್ಯ, ಡಾ.ಕೆ. ಸುಧಾಕರ್ ಮತ್ತು ಎನ್.ಎಸ್. ನಂದೀಶ್ ರೆಡ್ಡಿಯನ್ನು ನಿಯೋಜನೆ ಮಾಡಲಾಗಿದೆ.

ಅದೇ ರೀತಿಯಾಗಿ ಸಂಘಟನಾತ್ಮಕ ಜಿಲ್ಲೆಯ ಪ್ರಮುಖರಾಗಿ ಬೆಂಗಳೂರು ದಕ್ಷಿಣಕ್ಕೆ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರಕ್ಕೆ ಎಸ್. ಹರೀಶ್, ಬೆಂಗಳೂರು ಕೇಂದ್ರಕ್ಕೆ ಎ.ಆರ್. ಸಪ್ತಗಿರಿ ಗೌಡ ಅವರನ್ನು ನೇಮಿಸಲಾಗಿದೆ. ಪಾಲಿಕೆ ಪ್ರಮುಖರು ಮತ್ತು ಸಹ ಪ್ರಮುಖರಾಗಿ ಬೆಂಗಳೂರು ಪೂರ್ವಕ್ಕೆ ಎಂಟಿಬಿ ನಾಗರಾಜು, ಕೆ.ಎಸ್. ನವೀನ್, ಬೆಂಗಳೂರು ಉತ್ತರಕ್ಕೆ ಮುನಿರತ್ನ, ಭಾರತಿ ಶೆಟ್ಟಿ, ಬೆಂಗಳೂರು ದಕ್ಷಿಣಕ್ಕೆ ಬಿ.ಎ.ಬಸವರಾಜ್(ಬೈರತಿ), ಎನ್. ರವಿಕುಮಾರ್, ಬೆಂಗಳೂರು ಕೇಂದ್ರಕ್ಕೆ ಡಾ.ಸಿ.ಎನ್. ಅಶ್ವಥನಾರಾಯಣ, ಡಿ.ಎಸ್. ಅರುಣ್ ಮತ್ತು ಬೆಂಗಳೂರು ಪಶ್ಚಿಮ ಕೆ.ಗೋಪಾಲಯ್ಯ, ಎ. ನಾರಾಯಣಸ್ವಾಮಿ ಮತ್ತು ಅಶ್ವಥ್ ನಾರಾಯಣ ಅವರನ್ನು ನಿಯೋಜನೆ ಮಾಡಿ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net